ಸ್ಕ್ಯಾನಿಂಗ್ ರಿಪೋರ್ಟ್‌ನಲ್ಲಿ L 5 S1 ಸಮಸ್ಯೆ : ದರ್ಶನ್ ಭೇಟಿಗೆ ನಾಳೆ ಪತ್ನಿ ಬರುವ ಸಾಧ್ಯತೆ

Sampriya
ಗುರುವಾರ, 24 ಅಕ್ಟೋಬರ್ 2024 (19:41 IST)
ಬೆಂಗಳೂರು:  ಜೈಲು ಸೇರಿದ ಬಳಿಕ ತೀವ್ರವಾದ ಬೆನ್ನುನೋವಿನಿಂದ ಬಳಲುತ್ತಿರುವ ನಟ ದರ್ಶನ್ ಅವರ ಮೆಡಿಕಲ್ ಸ್ಕ್ಯಾನಿಂಗ್ ರಿರ್ಪೋಟ್‌ನಲ್ಲಿ L 5 S1 ಸಮಸ್ಯೆ ಇರುವುದು ದೃಢಪಟ್ಟಿದೆ.

ಹಾಗಾಗಿ ದರ್ಶನ್ ಆರೋಗ್ಯ ಬಗ್ಗೆ ತಿಳಿದುಕೊಳ್ಳಲು ನಾಳೆ ಪತ್ನಿ ವಿಜಯಲಕ್ಷ್ಮಿ ಬಳ್ಳಾರಿ ಜೈಲಿಗೆ ಭೇಟಿ ನೀಡುವ ಸಾಧ್ಯತೆಯಿದೆ. ಆರಂಭದಲ್ಲಿ ದರ್ಶನ್ ಚಿಕಿತ್ಸೆ ಬೇಡ, ಸ್ಕ್ಯಾನಿಂಗ್ ಬೇಡ ಎನ್ನುತ್ತಿದ್ದರು. ಆದರೆ ಕಳೆದೆರಡು ವಾರಗಳಿಂದ ದರ್ಶನ್‌ಗೆ ಆ ಬೆನ್ನು ನೋವನ್ನ ತಡೆಯುವುದಕ್ಕೆ ಆಗದೇ, ಹೈ ಸೆಕ್ಯುರಿಟಿ ಸೆಲ್‌ನಲ್ಲೇ ಒಬ್ಬರೇ ಒದ್ದಾಡುತ್ತಿದ್ದರು.

ಆದರೆ ದರ್ಶನ್ ನೋವು ನೋಡಿ ಚಿಕಿತ್ಸೆ ಪಡೆಯಿರಿ ಎಂದು ವಿಜಯಲಕ್ಷ್ಮಿ ತಿಳಿಸಿದ್ದರು. ಅವರ ಸಲಹೆಯಂತೆ ದರ್ಶನ್ ಸ್ಕ್ಯಾನಿಂಗ್ ಮಾಡಲು ಒಪ್ಪಿಕೊಂಡರು. ಬಳಿಕ ಜೈಲಿಗೆ ವಿಮ್ಸ್ ನ ಅರ್ಥೊಪೆಡಿಕ್ ಹಾಗೂ ನ್ಯೂರೋ ಸರ್ಜನ್ ಡಾ. ವಿಶ್ವನಾಥ ಭೇಟಿ ನೀಡಿ, ದರ್ಶನ್ ಆರೋಗ್ಯ ಪರಿಶೀಲನೆ ಮಾಡಿದ್ದರು. ಸ್ಕ್ಯಾನಿಂಗ್ ಬಳಿಕ  ವರದಿ ಬಂದಿದ್ದು, ಅದರಲ್ಲಿ ದರ್ಶನ್ ಅವರ L5S1 ಸಮಸ್ಯೆ ಇರುವುದು ದೃಢಪಟ್ಟಿದೆ.

ನಿರ್ಲಕ್ಷ್ಯ ಮಾಡದೇ ಕೂಡಲೇ ಶಸ್ತ್ರಚಿಕಿತ್ಸೆ ಮಾಡಿಸುವ ಬಗ್ಗೆ ವರದಿ ನೀಡಿದ್ದಾರೆ. ವೈದ್ಯರ ವರದಿಯನ್ನು ಆಧರಿಸಿ ಜೈಲು ಅಧಿಕಾರಿಗಳು ದರ್ಶನ್ ಪತ್ನಿ ವಿಜಯಲಕ್ಷ್ಮಿಯೊಂದಿಗೆ ಚರ್ಚಿಸಿ ಶಸ್ತ್ರಚಿಕಿತ್ಸೆ ಮಾಡಿಸುವ ಕುರಿತು ನಿರ್ಧರಿಸುವ ಸಾಧ್ಯತೆ ಇದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನದ್ದಲ್ಲ: ಪುರುಷೋತ್ತಮ ಬಿಳಿಮಲೆ

ಧನ್ವೀರ್ ಹೇಳಿಕೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಂಕಷ್ಟ

ದಿಡೀರನೇ ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಪ್ಪಾ

ಮುಂದಿನ ಸುದ್ದಿ
Show comments