ಹಸಿರು ಸೀರೆಯುಟ್ಟು ಸೀಮಂತ ಮಾಡಿಕೊಂಡ ನೇಹಾ ಗೌಡಗೆ ದೃಷ್ಟಿ ತೆಗೆಯಿರಿ ಎಂದ ಅಭಿಮಾನಿಗಳು

Sampriya
ಬುಧವಾರ, 21 ಆಗಸ್ಟ್ 2024 (16:49 IST)
Photo Courtesy X
ಬೆಂಗಳೂರು: ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಲಕ್ಷ್ಮೀ ಬರಮ್ಮ ಸೀರಿಯಲ್ ಮೂಲಕ ಗೊಂಬೆ ಎಂದೇ ಮನೆ ಮಾತಾಗಿರುವ ಕಿರುತೆರೆ ನಟಿ ನೇಹಾ ಗೌಡ ತಾಯಿಯಾಗ್ತಿದ್ದಾರೆ. ಅವರ ಸೀಮಂತ ಸಮಾರಂಭ ಅದ್ಧೂರಿಯಾಗಿ ನಡೆದಿದ್ದು, ಸೆಲೆಬ್ರಿಟಿಗಳು ಸೇರಿದಂತೆ ಕುಟುಂಬದವರು ಭಾಗಿಯಾಗಿ ಶುಭ ಹಾರೈಸಿದ್ದಾರೆ.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ಅವರ ಸೀಮಂತದ ಫೋಟೋ ಹರಿದಾಡುತ್ತಿದೆ. ಲಕ್ಷ್ಮೀ ಬಾರಮ್ಮ, ರಾಜಾ ರಾಣಿ ರಿಯಾಲಿಟಿ ಶೋ ಹಾಗೂ ಬಿಗ್ ಬಾಸ್ ಶೋನಲ್ಲಿ ಮಿಂಚಿರುವ ನೇಹಾ ಸದ್ಯ ಅಮ್ಮನಾಗುವ ಖುಷಿಯಲ್ಲಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯರಾಗಿರುವ ಅವರು  ತಮ್ಮ ಜೀವನದ ಸುಂದರ ಕ್ಷಣಗಳನ್ನು ಅಭಿಮಾನಿಗಳ ಜೊತೆ ಹಂಚಿಕೊಳ್ತಿದ್ದಾರೆ.

ಇನ್ನೂ ನೇಹಾ ಅವರು ಪತಿ ಚಂದನ್ ಅವರು ಈ ಹಿಂದೆ ವಿದೇಶದಲ್ಲಿ ಕೆಲಸ ಮಾಡುತ್ತಿದ್ದರು. ಇದೀಗ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಅಂತರಪಟ ಸೀರಿಯಲ್‌ನಲ್ಲಿ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ. ಈ ಸೀರಿಯಲ್ ಸದ್ಯ ಟಾಪ್ ಸೀರಿಯಲ್‌ಗಳಲ್ಲಿ ಒಂದಾಗಿದೆ.

ಇನ್ನೂ ಸೀಮಂತ ಸಮಾರಂಭದಲ್ಲೂ 'ಅಂತರಪಟ' ಧಾರಾವಾಹಿ ತಂಡ ಪಾಲ್ಗೊಂಡಿತ್ತು. ಸೀರಿಯಲ್ ನಿರ್ದೇಶಕಿ ಸ್ವಪ್ನ ಕೃಷ್ಣ ಅವರು ನೇಹಾ  ಜೊತೆಗಿರುವ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಅವರು ಹಂಚಿಕೊಂಡ ಫೋಟೋದಲ್ಲಿ ನಟಿ ನೇಹಾ ಗೌಡ, ಪತಿ ಚಂದನ್ ಗೌಡ ಹಾಗೂ ನಿರ್ದೇಶಕಿ ಸ್ವಪ್ನ ಕೃಷ್ಣ ಹಾಗೂ ಅಂತರಪಟ ಧಾರಾವಾಹಿ ನಾಯಕ ನಟಿ ತನ್ವಿಯಾ ಬಾಲರಾಜ್, ನಟಿ ಸೋನು ಗೌಡ, ನಟಿ ಜ್ಯೋತಿ ಸೇರಿದಂತೆ ಅನೇಕ ನಟಿಯರು ಕಾಣಿಸಿಕೊಂಡಿದ್ದಾರೆ.

ಹಸಿರು ಸೀರೆಯುಟ್ಟ ನೇಹಾ ಗೌಡಗೆ ಅವರ ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಗುಟ್ಟಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಗೀತಾ

ರಾಜ್ ಬಿ ಶೆಟ್ಟಿ ಹೆಸರೂ ಹೇಳದ ರಿಷಬ್ ಶೆಟ್ಟಿ: ನೆಟ್ಟಿಗರದ್ದು ಒಂದೇ ಪ್ರಶ್ನೆ

ಮದುವೆ ಬಳಿಕ ಮೊದಲ ಬಾರೀ ಒಟ್ಟಿಗೆ ಕಾಣಿಸಿಕೊಂಡ ಸಮಂತಾ- ರಾಜ್‌ ನಿಡಿಮೋರು

ಕೇರಳ ರಾಜ್ಯ ಪ್ರಶಸ್ತಿ ಪುರಸ್ಕೃತ ಮಲಯಾಳಂ ನಟ ಅಖಿಲ್ ವಿಶ್ವನಾಥ್ ಅನುಮಾನಾಸ್ಪದ ಸಾವು

ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಮೊದಲ ದಿನವೇ 30 ಕೋಟಿ ಗಳಿಸಿದ್ದು ನಿಜಾನಾ

ಮುಂದಿನ ಸುದ್ದಿ
Show comments