Publish Date: Sat, 22 Jan 2022 (16:20 IST)
Updated Date: Sat, 22 Jan 2022 (16:21 IST)
ಮುಂಬೈ: ಕೊರೋನಾ ಸೋಂಕಿನಿಂದಾಗಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಎರಡು ವಾರಗಳಿಂದ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದೆ ಎಂದು ವೈದ್ಯರು ಹೇಳಿದ್ದಾರೆ.
ಕೊರೋನಾ ಸೋಂಕಿನಿಂದಾಗಿ ಲತಾ ಆರೋಗ್ಯ ಗಂಭೀರ ಸ್ಥಿತಿಗೆ ತಲುಪಿತ್ತು. ಹೀಗಾಗಿ ಅವರನ್ನು ಐಸಿಯುವಿನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಹಾಗಿದ್ದರೂ ಅವರ ಆರೋಗ್ಯದಲ್ಲಿ ವ್ಯತ್ಯಾಸವಾಗದೇ ಇರುವುದು ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿತ್ತು.
ಅವರ ಕುಟುಂಬಸ್ಥರೂ ಲತಾ ಚೇತರಿಕೆಗಾಗಿ ದೇವರ ಮೊರೆ ಹೋಗಿದ್ದರು. ಆದರೆ ಇದೀಗ ಕೊಂಚ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಚೇತರಿಕೆ ಕಂಡುಬರುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದು ಅಭಿಮಾನಿಗಳಿಗೆ ಕೊಂಚ ನಿರಾಳ ತಂದಿದೆ.