ಮುಂಬೈ: ಕೊರೋನಾ ಸೋಂಕಿನಿಂದಾಗಿ ಕಳೆದ ಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಆರೋಗ್ಯದಲ್ಲಿ ತುಸು ಚೇತರಿಕೆ ಕಂಡುಬಂದಿದೆ ಎಂದು ವೈದ್ಯರು ಹೇಳಿದ್ದಾರೆ.
ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 92 ವರ್ಷದ ಲತಾ ಮಂಗೇಶ್ಕರ್ ಅವರ ಆರೋಗ್ಯದಲ್ಲಿ ಈಗ ತುಸು ಚೇತರಿಕೆಯಿದೆ. ಹಾಗಿದ್ದರೂ ಸುರಕ್ಷತೆ ಕಾರಣದಿಂದ ತೀವ್ರ ನಿಗಾದಲ್ಲಿರಿಸಲಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಎರಡು ದಿನಗಳ ಹಿಂದೆ ಲತಾಗೆ ಅಳವಡಿಸಿದ್ದ ವೆಂಟಿಲೇಟರ್ ತೆಗೆಯಲಾಗಿದೆ. ಅವರ ಆರೋಗ್ಯದ ಬಗ್ಗೆ ಯಾವುದೇ ಸುಳ್ಳು ಸುದ್ದಿಗಳಿಗೆ ಕಿವಿಗೊಡುವುದು ಬೇಡ ಎಂದು ವೈದ್ಯರು ಹೇಳಿದ್ದಾರೆ.