Select Your Language

Notifications

webdunia
webdunia
webdunia
webdunia

ಅಪ್ಪು ನಮನ ಕಾರ್ಯಕ್ರಮದ ರೂಪುರೇಷೆ ತಿಳಿಯಿರಿ

ಅಪ್ಪು ನಮನ ಕಾರ್ಯಕ್ರಮದ ರೂಪುರೇಷೆ ತಿಳಿಯಿರಿ
ಬೆಂಗಳೂರು , ಮಂಗಳವಾರ, 16 ನವೆಂಬರ್ 2021 (08:38 IST)
ನಟ ಪುನೀತ್ ರಾಜ್ಕುಮಾರ್ ಅವರಿಗೆ ಚಿತ್ರರಂಗದ ಪರವಾಗಿ ನಮನ ಸಲ್ಲಿಸುವ ಉದ್ದೇಶದಿಂದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಇಂದು ‘ಪುನೀತ ನಮನ’ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಕನ್ನಡ ಚಿತ್ರರಂಗದ ಎಲ್ಲಾ ಗಣ್ಯರು ಭಾಗವಹಿಸಬೇಕು ಎಂಬ ಉದ್ದೇಶದಿಂದ ಇಂದು, ಚಿತ್ರ ಪ್ರದರ್ಶನ ಹೊರತುಪಡಿಸಿ, ಚಿತ್ರೋದ್ಯಮದ ಮತ್ತೆಲ್ಲಾ ಕೆಲಸಗಳಿಗೆ ರಜೆ ಘೋಷಿಸಲಾಗಿದೆ. ಮಧ್ಯಾಹ್ನ 3 ಗಂಟೆಗೆ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಕಾರ್ಯಕ್ರಮ ಆರಂಭವಾಗಲಿದ್ದು, ಸಕಲ ಸಿದ್ಧತೆ ಮಾಡಲಾಗಿದೆ. ದಕ್ಷಿಣ ಭಾರತದ ಖ್ಯಾತ ಕಲಾವಿದರು, ರಾಜಕೀಯ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಡಾ.ರಾಜ್ಕುಮಾರ್ ಕುಟುಂಬ ಭಾಗಿಯಾಗಲಿದ್ದು, ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ಕುಮಾರ್ ಹಾಗೂ ಅವರ ಕುಟುಂಬದವರು ‘ಪುನೀತ ನಮನ’ದಲ್ಲಿ ಉಪಸ್ಥಿತರಿರಲಿದ್ದಾರೆ. ಪಾಸ್ ಇದ್ದವರಿಗೆ ಮಾತ್ರ ಪ್ರವೇಶ ನೀಡಲಾಗುತ್ತಿದ್ದು, 2000 ಜನ ಭಾಗವಹಿಸುವ ನಿರೀಕ್ಷೆ ಇದೆ.
ಸ್ಯಾಂಡಲ್ವುಡ್ನ 142 ಕಲಾವಿದರಿಗೆ ಆಹ್ವಾನ ನೀಡಲಾಗಿದ್ದು, ಪರಭಾಷೆಯ 40 ಕ್ಕೂ ಹೆಚ್ಚು ಕಲಾವಿದರು ಪುನೀತ ನಮನಕ್ಕೆ ಬರಲಿದ್ದಾರೆ. ಪುನೀತ್ ಎಲ್ಲಾ ನಟರ ಜೊತೆ ಅನ್ಯೋನ್ಯವಾಗಿದ್ದರು. ಆದ್ದರಿಂದಲೇ ಕನ್ನಡದ ಎಲ್ಲಾ ನಟರು ಆಗಮಿಸುವ ನಿರೀಕ್ಷೆ ಇದೆ.
ಕಾರ್ಯಕ್ರಮದಲ್ಲಿ ನಾಗೇಂದ್ರ ಪ್ರಸಾದ್ ಬರೆದಿರುವ ಹಾಡಿನ ಮೂಲಕ ಪುನೀತ್ಗೆ ನಮನ ಸಲ್ಲಿಸಲಾಗುತ್ತದೆ. ಗುರುಕಿರಣ್ ಹಾಡಿಗೆ ಸಂಗೀತ ಸಂಯೋಜನೆ ಮಾಡಿದ್ದು, ಈ ಗೀತೆಯ ಮೂಲಕ ಕಾರ್ಯಕ್ರಮ ಆರಂಭ ಆಗಲಿದೆ. ವಿಜಯ್ ಪ್ರಕಾಶ್, ಗುರುಕಿರಣ್ ಹಾಗೂ ರಾಜೇಶ್ ಕೃಷ್ಣನ್ ಅವರಿಂದ ಗೀತ ನಮನ ನಡೆಯಲಿದೆ. ಮಧ್ಯಾಹ್ಯ 3 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕಾರ್ಯಕ್ರಮ ನಡೆಯಲಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಅಪ್ಪು ನಮನ ಕಾರ್ಯಕ್ರಮಕ್ಕೆ ಯಾರೆಲ್ಲ ಆಗಮಿಸುತ್ತಾರೆ?