Webdunia - Bharat's app for daily news and videos

Install App

ನಟಿ ಲೀಲಾವತಿ ಆಸ್ಪತ್ರೆ ಮುಂದೆ ಪ್ರತಿಮೆ ನಿರ್ಮಿಸಲು ಮುಂದಾದ ಸರ್ಕಾರ

Webdunia
ಮಂಗಳವಾರ, 12 ಡಿಸೆಂಬರ್ 2023 (09:00 IST)
Photo Courtesy: Twitter
ಬೆಂಗಳೂರು: ಇತ್ತೀಚೆಗಷ್ಟೇ ನಿಧನರಾದ ಹಿರಿಯ ನಟಿ ಲೀಲಾವತಿ ಅವರಿಗೆ ರಾಜ್ಯ ಸರ್ಕಾರ ವಿಶೇಷವಾಗಿ ಗೌರವ ಸಲ್ಲಿಸಲು ಮುಂದಾಗಿದೆ.

ಲೀಲಾವತಿ ಸಾವಿಗೆ ಮುನ್ನ ತಮ್ಮ ಸ್ವಂತ ವೆಚ್ಚದಲ್ಲಿ ಪಶು ವೈದ್ಯಕೀಯ ಆಸ್ಪತ್ರೆಯೊಂದನ್ನು ನಿರ್ಮಿಸಿಕೊಟ್ಟಿದ್ದರು. ಇದನ್ನು ಸ್ವತಃ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉದ್ಘಾಟಿಸಿದ್ದರು.

ಸದನದಲ್ಲಿ ನಿನ್ನೆ ಲೀಲಾವತಿ ನಿಧನಕ್ಕೆ ಸಂತಾಪ ವ್ಯಕ್ತಪಡಿಸುತ್ತಾ ಡಿಕೆ ಶಿವಕುಮಾರ್ ಹಿರಿಯ ನಟಿಯ ಸಾಮಾಜಿಕ ಕಳಕಳಿಯನ್ನು ಕೊಂಡಾಡಿದರು. ಜೊತೆಗೆ ಲೀಲಾವತಿ ಸ್ಮರಣಾರ್ಥ ಸರ್ಕಾರ ಕೈಗೊಳ್ಳಲಿರುವ ಕೆಲಸದ ಬಗ್ಗೆ ಮಾಹಿತಿ ನೀಡಿದರು.

ಲೀಲಾವತಿಯ ಕನಸಿನ ಪಶು ವೈದ್ಯಕೀಯ ಆಸ್ಪತ್ರೆ ಮುಂದೆ ಅವರ ಪ್ರತಿಮೆ ಸ್ಥಾಪಿಸಿ ಗೌರವಿಸಬೇಕು ಎಂದು ವಿರೋಧ ಪಕ್ಷದವರೂ ಆಗ್ರಹಿಸಿದ್ದರು. ಅವರ ಬೇಡಿಕೆಯನ್ನೂ ಗಣನೆಗೆ ತೆಗೆದುಕೊಂಡು ಸರ್ಕಾರ ಅಗತ್ಯ ಕ್ರಮ ಕೈಗೊಳ‍್ಳಲಿದೆ. ಪಶು ವೈದ್ಯಕೀಯ ಆಸ್ಪತ್ರೆ ಮುಂದೆ ಲೀಲಾವತಿಯವರ ಪ್ರತಿಮೆ ನಿರ್ಮಿಸಿ ಗೌರವಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments