Publish Date: Mon, 25 Oct 2021 (09:25 IST)
Updated Date: Mon, 25 Oct 2021 (09:27 IST)
ಬೆಂಗಳೂರು: ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿ, ನಟಿಸಿರುವ ಲವ್ ಮಾಕ್ಟೇಲ್ 2 ಸಿನಿಮಾಗೆ ಸೆನ್ಸಾರ್ ಗ್ರೀನ್ ಸಿಗ್ನಲ್ ನೀಡಿದೆ.
ಲವ್ ಮಾಕ್ಟೇಲ್ ಸಿನಿಮಾ ವೀಕ್ಷಿಸಿರುವ ಸೆನ್ಸಾರ್ ಮಂಡಳಿ ಯು ಸರ್ಟಿಫಿಕೇಟ್ ನೀಡಿದೆ. ಈ ಬಗ್ಗೆ ಡಾರ್ಲಿಂಗ್ ಕೃಷ್ಣ ಖುಷಿಯಿಂದಲೇ ಮಾತನಾಡಿದ್ದಾರೆ.
ಈಗಾಗಲೇ ಟ್ರೈಲರ್ ಬಿಡುಗಡೆಗೆ ರೆಡಿ ಮಾಡಿಕೊಂಡಿರುವ ಕೃಷ್ಣ ಸದ್ಯದಲ್ಲೇ ಟ್ರೈಲರ್ ಲಾಂಚ್ ಮಾಡಿ ಬಳಿಕ ಸಿನಿಮಾ ಬಿಡುಗಡೆ ದಿನಾಂಕ ಘೋಷಿಸಲಿದ್ದಾರೆ. ಎಲ್ಲವೂ ಅಂದುಕೊಂಡಂತೇ ಆದರೆ ಮುಂದಿನ ತಿಂಗಳು ಸಿನಿಮಾ ಬಿಡುಗಡೆಯಾಗಬಹುದು.