ಬೆಂಗಳೂರು: ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿ ನಟಿಸಿರುವ ಲವ್ ಮಾಕ್ಟೇಲ್ ಭಾಗ 2 ಪೋಸ್ಟ್ ಪ್ರೊಡಕ್ಷನ್ ಕೆಲಸಗಳೆಲ್ಲಾ ಮುಗಿದಿದ್ದು, ಬಿಡುಗಡೆಗೆ ರೆಡಿಯಾಗಿದೆ.
ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಮುಕ್ತಾಯವಾಗಿದ್ದು ಸೆನ್ಸಾರ್ ಗೆ ರೆಡಿಯಾಗಿದೆ ಎಂದು ಮಿಲನಾ ನಾಗರಾಜ್ ಮಾಹಿತಿ ನೀಡಿದ್ದಾರೆ.
ಮುಂದಿನ ತಿಂಗಳು ಅಥವಾ ಡಿಸೆಂಬರ್ ನಲ್ಲಿ ಚಿತ್ರ ತೆರೆ ಕಾಣುವ ನಿರೀಕ್ಷೆಯಿದೆ. ಈಗಾಗಲೇ ಕೆಲವು ಹಾಡುಗಳು ಬಿಡುಗಡೆಯಾಗಿದ್ದು ಹಿಟ್ ಆಗಿವೆ. ಲವ್ ಮಾಕ್ಟೇಲ್ 1 ಸಿನಿಮಾ ಪ್ರೇಕ್ಷಕರಿಗೆ ಮೋಡಿ ಮಾಡಿತ್ತು. ಇದೀಗ ಅದರ ಮುಂದಿನ ಭಾಗದ ಸಿನಿಮಾ ಮೇಲೂ ಅಷ್ಟೇ ಕುತೂಹಲವಿದೆ.