ನಾಲ್ಕೈದು ವರ್ಷ ಯುವಕನೊಬ್ಬನೊಂದಿಗೆ ಲವ್ವಿ ಡವ್ವಿ ನಡೆಸಿದ ಯುವತಿಯೊಬ್ಬಳು ಬೇರೊಬ್ಬನೊಂದಿಗೆ ಮದುವೆಯಾಗಿದ್ದಾಳೆ.
ತಾನು ಪ್ರೀತಿಸುತ್ತಿದ್ದ ಯುವತಿ ಬೇರೊಬ್ಬನೊಂದಿಗೆ ಮದುವೆಯಾಗಿರೋದನ್ನು ಸಹಿಸದ ಪ್ರಿಯಕರ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಉತ್ತರ ಪ್ರದೇಶದ ವಾರಣಾಸಿಯಲ್ಲಿ ಘಟನೆ ನಡೆದಿದ್ದು, ಆತ್ಮಹತ್ಯೆಗೆ ಶರಣಾದ ಪಾಗಲ್ ಪ್ರೇಮಿಯನ್ನು ಅಜಯ್ ಕುಮಾರ್ ಎಂದು ಗುರುತಿಸಲಾಗಿದೆ.
ಅಜಯ್ ಕುಮಾರ್ ಪ್ರೀತಿಸುತ್ತಿದ್ದ ಯುವತಿ ಬೇರೊಬ್ಬನೊಂದಿಗೆ ಮದುವೆಯಾಗಿದ್ದಾಳೆ. ಇದರಿಂದ ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಅಜಯ್ ಕುಮಾರ್ ಡೆತ್ ನೋಟ್ ಬರೆದಿಟ್ಟಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.