ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅತಿಥಿ ಪಾತ್ರದಲ್ಲಿ ಅಭಿನಯಿಸಿದ್ದ ಸಿನಿಮಾ ಲಕ್ಕಿ ಮ್ಯಾನ್. ಈ ಸಿನಿಮಾ ವತಿಯಿಂದ ಈಗ ಸಿಹಿ ಸುದ್ದಿಯೊಂದು ಹೊರಬಂದಿದೆ.
ಹೊಸ ವರ್ಷದ ಹೊಸ್ತಿಲಲ್ಲಿ ಹೊಸ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿರುವ ಚಿತ್ರತಂಡ ಸದ್ಯದಲ್ಲೇ ಚಿತ್ರ ಬಿಡುಗಡೆಯಾಗುತ್ತಿರುವುದಾಗಿ ಹೇಳಿದೆ. ಪುನೀತ್ ಇರುವ ಪೋಸ್ಟರ್ ಒಂದನ್ನು ಚಿತ್ರತಂಡ ಬಿಡುಗಡೆ ಮಾಡಿದೆ.
ಈ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ಅಭಿನಯಿಸಿದ್ದಾರೆ. ಚಿತ್ರದ ಹಾಡೊಂದರಲ್ಲಿ ಪುನೀತ್ ಮತ್ತು ಡ್ಯಾನ್ಸ್ ಸ್ಟಾರ್ ಪ್ರಭುದೇವ ಜೊತೆಯಾಗಿ ಸ್ಟೆಪ್ಸ್ ಹಾಕಿದ್ದಾರೆ. ಹೀಗಾಗಿ ಈ ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆಯಿದೆ.