Select Your Language

Notifications

webdunia
webdunia
webdunia
webdunia

Machete Reels Case: ರಜತ್‌ಗೆ 14 ದಿನಗಳ ನ್ಯಾಯಾಂಗ ಬಂಧನ

Machete Reels Case, Rajath Kishan, Vinay Gowda

Sampriya

ಬೆಂಗಳೂರು , ಬುಧವಾರ, 16 ಏಪ್ರಿಲ್ 2025 (17:22 IST)
ಬೆಂಗಳೂರು: ಲಾಂಗ್ ಹಿಡಿದು ರೀಲ್ಸ್  ಮಾಡಿದ ಪ್ರಕರಣ ಸಂಬಂಧ ಬಿಗ್‌ಬಾಸ್ ಸ್ಪರ್ಧಿ ರಜತ್‌ಗೆ ಮತ್ತೇ ಸಂಕಷ್ಟ ಎದುರಾಗಿದೆ.  ವಿಚಾರಣೆಗೆ ಹಾಜರಾಗದ ಸಂಬಂಧ ರಜತ್‌ನನ್ನು ಇಂದು ಸ್ಟೇಶನ್‌ಗೆ ಹಾಜರಾದ ರಜತ್‌ನನ್ನು ಪೊಲೀಶರು ವಶಕ್ಕೆ ಪಡೆದಿದ್ದಾರೆ. ಇದೀಗ ಪ್ರಕರಣದಲ್ಲಿ ರಜತ್‌ಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ 24ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ.

ರೀಲ್ಸ್ ಕೇಸ್‌ಗೆ ಸಂಬಂಧ ವಿಚಾರಣೆಗೆ ರಜತ್‌ಗೆ 2 ಬಾರಿ ನೋಟಿಸ್ ನೀಡಿದ್ದರು. ವಿಚಾರಣೆಗೆ ಹಾಜರಾಗದ ರಜತ್‌ನನ್ನು ಬಸವೇಶ್ವರನಗರ ಪೊಲೀಸರು ಬಂಧಿಸಿ ಇಂದು ಕೋರ್ಟ್ ಹಾಜರುಪಡಿಸಿದ್ದರು.

ವಿಚಾರಣೆ ನಡೆಸಿದ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಈ ಆದೇಶದ ಅನ್ವಯ ರಜತ್ ಏ.29ರವರೆಗೆ ಪರಪ್ಪನ ಅಗ್ರಹಾರದಲ್ಲಿ ಇರಬೇಕಾಗುತ್ತದೆ.

ರೀಲ್ಸ್‌ಗೆ ಬಳಸಿದ್ದ ಮಚ್ಚಿನ ಬಗ್ಗೆ ಸರಿಯಾದ ಮಾಹಿತಿ ನೀಡದ ಹಿನ್ನೆಲೆ 2ಬಾರಿ ನೋಟಿಸ್ ನೀಡಲಾಗಿತ್ತು.  ಆದರೆ ಪೊಲೀಸ್ ವಿಚಾರಣೆಗೆ ಗೈರಾಗಿದ್ದಕ್ಕೆ ಅಸಮಾಧಾನಗೊಂಡಿದ್ದ ಕೋರ್ಟ್ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ತನ್ನ ಬ್ಯೂಟಿಯನ್ನು ಕೆದಕಿದವನಿಗೆ ಚಳಿ ಬಿಡಿಸಿದ ನಟಿ ಖುಷ್ಭೂ