Publish Date: Wed, 28 Sep 2022 (09:30 IST)
Updated Date: Wed, 28 Sep 2022 (09:44 IST)
ಹೈದರಾಬಾದ್: ಟಾಲಿವುಡ್ ಸೂಪರ್ ಸ್ಟಾರ್ ನಟ ಮಹೇಶ್ ಬಾಬು ತಾಯಿ ಇಂದಿರಾ ದೇವಿ ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಲವು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಇಂದು ಅವರ ಮೃತದೇಹವನ್ನು ಹೈದರಾಬಾದ್ ನ ಪದ್ಮಾಲಯ ಸ್ಟುಡಿಯೋದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುತ್ತಿದೆ. ತಾಯಿ ವಿಯೋಗದ ಸುದ್ದಿ ಬಂದ ಬೆನ್ನಲ್ಲೇ ಮಹೇಶ್ ಬಾಬು ಕುಟುಂಬಕ್ಕೆ ಕಲಾವಿದರು, ಅಭಿಮಾನಿಗಳು ಸಂತಾಪ ಸೂಚಿಸಿ ಸಂದೇಶ ನೀಡುತ್ತಿದ್ದಾರೆ.