ಹೈದರಾಬಾದ್: ಎಸ್.ಎಸ್. ರಾಜಮೌಳಿ-ಪ್ರಿನ್ಸ್ ಮಹೇಶ್ ಬಾಬು ಕಾಂಬಿನೇಷನ್ ನಲ್ಲಿ ಮೂಡಿಬರಲಿರುವ ಹೊಸ ಸಿನಿಮಾ ಲಾಂಚ್ ಗೆ ಮುಹೂರ್ತ ಫಿಕ್ಸ್ ಆಗಿದೆ.
ಆರ್ ಆರ್ ಆರ್ ಬಳಿಕ ರಾಜಮೌಳಿ, ಮಹೇಶ್ ಬಾಬು ಜೊತೆ ಸಿನಿಮಾ ಮಾಡುವುದಾಗಿ ಈಗಾಗಲೇ ಘೋಷಿಸಿದ್ದರು. ಇದೀಗ ಸಿನಿಮಾದ ಸ್ಕ್ರಿಪ್ಟ್ ಕೆಲಸಗಳು ನಡೆಯುತ್ತಿವೆ.
ಮುಂದಿನ ವರ್ಷ ಅಂದರೆ 2023 ರ ಜೂನ್ ನಿಂದ ಸಿನಿಮಾ ಸೆಟ್ಟೇರಲಿದೆ ಎನ್ನಲಾಗಿದೆ. ಬಿಗ್ ಬಜೆಟ್ ನ ಈ ಸಿನಿಮಾ ಐತಿಹಾಸಿಕ ಕತೆಯನ್ನೊಳಗೊಂಡಿದೆ ಎನ್ನಲಾಗಿದೆ.