ಹೈದರಾಬಾದ್ : ಟಾಲಿವುಡ್ ನಟ ಮಹೇಶ್ ಬಾಬು ಅವರ ಅಭಿನಯದ ಚಿತ್ರ ‘ಸರ್ಕಾರು ವಾರಿ ಪಾಟಾ’ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿದ ಹಿನ್ನಲೆಯಲ್ಲಿ ಈಗಾಗಲೇ ಚಿತ್ರೀಕರಣ ಸ್ಥಗಿತಗೊಂಡಿದೆ.
ಇತ್ತೀಚಿನ ಮಾಹಿತಿ ಪ್ರಕಾರ ಸೂಪರ್ ಸ್ಟಾರ್ ಕೃಷ್ಣ ಅವರ ಜನ್ಮ ದಿನದಂದು ‘ಸರ್ಕಾರು ವಾರಿ ಪಾಟಾ’ ಚಿತ್ರದ ನಿರ್ಮಾಪಕರು ಮಹೇಶ್ ಬಾಬು ಅವರ ಫಸ್ಟ್ ಲುಕ್ ಪೋಸ್ಟರ್ ಅನ್ನು ಮೇ 31ರಂದು ಬಿಡುಗಡೆ ಮಾಡಲು ಯೋಜಿಸುತ್ತಿದ್ದಾರೆ.
ಹಾಗೇ ಮಹೇಶ್ ಬಾಬು ಜನ್ಮದಿನದಂದು ಆಗಸ್ಟ್ 9ರಂದು ‘ಸರ್ಕಾರು ವಾರಾ ಪಾಟಾ’ ಟೀಸರ್ ಬಿಡುಗಡೆಯಾಗಲಿದೆ ಎಂಬ ಮಾತು ಕೂಡ ಕೇಳಿಬರುತ್ತಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಬಿಡುಗಡೆಯಾಗಿಲ್ಲ.