ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ನಿರ್ಮಾಪಕ, ನಟಿ ಮಾಲಾಶ್ರೀ ಪತಿ ರಾಮು ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.
ನಿನ್ನೆ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಕಳೆದ ಒಂದು ವಾರದ ಹಿಂದೆ ಕೊರೋನಾ ಸೋಂಕಿಗೊಳಗಾಗಿದ್ದ ಅವರು ಹೋಂ ಕ್ವಾರಂಟೈನ್ ನಲ್ಲಿಯೇ ಇದ್ದರು.
ಆದರೆ ಉಸಿರಾಟದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತರು ಪತ್ನಿ ಮಾಲಾಶ್ರೀ, ಪುತ್ರ ಆರ್ಯನ್ ಮತ್ತು ಪುತ್ರಿ ಅನನ್ಯಾರನ್ನು ಅಗಲಿದ್ದಾರೆ. ಇಂದು ಅವರ ಸ್ವಗ್ರಾಮ ಕೊಡಿಗೇಹಳ್ಳಿಯಲ್ಲಿ ಅಂತ್ಯ ಕ್ರಿಯೆ ನೆರವೇರಲಿದೆ. ಅವರ ನಿಧನಕ್ಕೆ ಸ್ಯಾಂಡಲ್ ವುಡ್ ನಟ-ನಟಿಯರು, ಅಭಿಮಾನಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.