Daily Horoscope
✕

ಮಲಯಾಳಂ ಖ್ಯಾತ ನಟ ಇನ್ನಸೆಂಟ್ ನಿಧನ

Webdunia
ಸೋಮವಾರ, 27 ಮಾರ್ಚ್ 2023 (07:30 IST)
ಕೊಚ್ಚಿ: ಮಲಯಾಳಂ ಖ್ಯಾತ ಪೋಷಕ ನಟ ಇನ್ನಸೆಂಟ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ  ವಯಸ್ಸಾಗಿತ್ತು.

ಕೆಲವು ದಿನಗಳ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದ ಇನ್ನಸೆಂಟ್ ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ 10.30 ರ ವೇಳೆಗೆ ಅಸುನೀಗಿದ್ದಾರೆ. ಕೆಲವು ವರ್ಷಗಳ ಹಿಂದೆ ಅವರಿಗೆ ಕ್ಯಾನ್ಸರ್ ರೋಗ ತಗುಲಿತ್ತು. ಆದರೆ ಅದನ್ನು ಮೆಟ್ಟಿನಿಲ್ಲುವಲ್ಲಿ ಅವರು ಯಶಸ್ವಿಯಾಗಿದ್ದರು. ಕೆಲವು ದಿನಗಳ ಹಿಂದೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಇಹಲೋಕ ತ್ಯಜಿಸಿದ್ದಾರೆ.

ಸುಮಾರು 750 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದರು. 1972 ರಲ್ಲಿ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ಇತ್ತೀಚೆಗಿನವರೆಗೂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದರು. ಮಲಯಾಳಂನಲ್ಲಿ ಒಂದು ಕಾಲದಲ್ಲಿ ಹಾಸ್ಯ ಚಕ್ರವರ್ತಿಯಾಗಿ ಮೆರೆದವರು. ಇದೀಗ ಅವರ ನಿಧನ ಮಲಯಾಳಂ ಚಿತ್ರರಂಗಕ್ಕೆ ತೀರಾ ಆಘಾತ ತಂದಿದೆ. ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಮೃತರು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಇಂದು ಸಂಜೆ ಅಂತ್ಯಕ್ರಿಯೆ ನಡೆಯುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments