ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

Sampriya
ಶನಿವಾರ, 2 ಆಗಸ್ಟ್ 2025 (19:16 IST)
Photo Credit X
ಕೊಚ್ಚಿ: ಮಲಯಾಳಂ ಚಲನಚಿತ್ರ ನಟ ಮತ್ತು ಮಿಮಿಕ್ರಿ ಕಲಾವಿದ ಕಲಾಭವನ್ ನವಾಸ್ ಅವರು ಶುಕ್ರವಾರ ಸಂಜೆ ಚೊಟ್ಟಣಿಕ್ಕರಾದ ಹೋಟೆಲ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶೂಟಿಂಗ್‌ಗಾಗಿ ತಂಗಿದ್ದ ಹೋಟೆಲ್‌ನಲ್ಲಿ ಶವವಾಗಿ ನವಾಸ್ (51) ಅವರು ಪತ್ತೆಯಾಗಿದ್ದಾರೆ. ಹೊಟೇಲ್ ಸಿಬ್ಬಂದಿ ಅವರನ್ನು ಎಚ್ಚರಿಸಲು ಹೋದಾಗ ಈ ಘಟನೆ ಬೆಳಕಿಗೆ ಬಂದಿದೆ. 

ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅವರಿಗೆ ಹೃದಯಾಘಾತವಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಬಹುಮುಖ ಮನರಂಜನಾಕಾರ, ನವಾಸ್ ಮಲಯಾಳಂ ಚಿತ್ರರಂಗದಲ್ಲಿ ಮಿಮಿಕ್ರಿ ಕಲಾವಿದ, ಹಿನ್ನೆಲೆ ಗಾಯಕ ಮತ್ತು ನಟನಾಗಿ ವ್ಯಾಪಕ ಮೆಚ್ಚುಗೆಯನ್ನು ಗಳಿಸಿದ್ದಾರೆ.

ಅವರ ನಿಧನಕ್ಕೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸಂತಾಪ ಸೂಚಿಸಿದ್ದಾರೆ<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭದಲ್ಲಿ ಗುಡ್‌ನ್ಯೂಸ್ ಹಂಚಿಕೊಂಡ ನಟ ರಾಮ್‌ ಚರಣ್, ಉಪಾಸನಾ ದಂಪತಿ

ಕಾಮಿಡಿ ಕಿಲಾಡಿಗಳು ಪ್ರೋಮೋ ನೋಡಿದ ನೆಟ್ಟಿಗರು ಗರಂ ಆಗಿದ್ಯಾಕೆ

ಹಿರಿಯ ನಟ ಉಮೇಶ್ ಚಿಕಿತ್ಸೆಗೆ ನೆರವಾಗಲು ಮುಖ್ಯಮಂತ್ರಿಗಳಿಗೇ ಪತ್ರ ಬರೆದ ಸಚಿವ ತಂಗಡಗಿ

ರಿಷಬ್ ಶೆಟ್ಟಿ ರೊಮ್ಯಾನ್ಸ್ ಸೀನ್ ಮಾಡುವಾಗ ಇದೊಂದು ಕಾರಣಕ್ಕೆ ಮಾನಿಟರ್ ಮುಂದಿರುತ್ತಾರಂತೆ ಪ್ರಗತಿ

ಕನ್ನಡ ಅಂತ ಬಂದ್ರೆ ನನ್ನ ಶೇಕ್ ಮಾಡಕ್ಕಾಗಲ್ಲ ಎಂದ ಅಶ್ವಿನಿ ಗೌಡ: ಕರ್ನಾಟಕ ರತ್ನ ಬಿಡಮ್ಮಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments