ಬೆಂಗಳೂರು: ಬಿಗ್ ಬಾಸ್ ವಿನ್ನರ್ ಮಂಜು ಪಾವಗಡ, ನಿರ್ದೇಶಕ ಸಿಂಪಲ್ ಸುನಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದರುವುದು ಕುತೂಹಲಕ್ಕೆ ಕಾರಣವಾಗಿದೆ.
ಬಿಗ್ ಬಾಸ್ ಶೋ ಮುಗಿದ ಮೇಲೆ ಮಂಜುಗೆ ಬೇಡಿಕೆ ಹೆಚ್ಚಾಗಿದೆ. ಹಲವು ಸಿನಿಮಾ ಆಫರ್ ಗಳು ಬರುತ್ತಿವೆ. ಈ ನಡುವೆ ಮಂಜು, ಸಿಂಪಲ್ ಸುನಿ ಭೇಟಿಯಾಗಿರುವುದು ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದೆ.
ತಮ್ಮ ಸಾಮಾಜಿಕ ಜಾಲತಾಣದಲ್ಲಿ ಸಿಂಪಲ್ ಸುನಿ ಸರ್ ಭೇಟಿಯಾಗಿರುವುದಾಗಿ ಮಂಜು ಬರೆದುಕೊಂಡಿದ್ದಾರೆ. ಇನ್ನು, ಗೋಲ್ಡನ್ ಸ್ಟಾರ್ ಗಣೇಶ್ ಜೊತೆಗೆ ಸಖತ್ ಸೇರಿದಂತೆ ನಾಲ್ಕು ಸಿನಿಮಾಗಳಲ್ಲಿ ತೊಡಗಿಸಿಕೊಂಡಿರುವ ಸುನಿ, ಈಗ ಮಂಜು ಜೊತೆಗೆ ಸಿನಿಮಾ ಮಾಡಲಿದ್ದಾರಾ ಎಂಬ ಪ್ರಶ್ನೆಗೆ ಸದ್ಯದಲ್ಲೇ ಉತ್ತರ ಸಿಗಲಿದೆ.