ಚೆನ್ನೈ : ತಮಿಳು ಮತ್ತು ಮಲಯಾಳಂ ನ ಖ್ಯಾತ ನಟಿ ಮಡೋನಾ ಸೆಬಾಸ್ಟಿಯನ್ ಅವರು ಇನ್ ಸ್ಟಾಗ್ರಾಂನಲ್ಲಿ ಫೋಟೊವೊಂದನ್ನು ಪೋಸ್ಟ್ ಮಾಡಿ ಅಭಿಮಾನಿಗಳ ಕುತೂಹಲಕ್ಕೆ ಕಾರಣವಾಗಿದ್ದಾರೆ.
ನಟಿ ಮಡೋನಾ ಸೆಬಾಸ್ಟಿಯನ್ ಮಲಯಾಳಂನ ಪ್ರೇಮಂ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಬಳಿಕ ವಿಜಯ್ ಸೇತುಪತಿ ಅವರ ಸೇತುಪತಿ ಚಿತ್ರದ ಮೂಲಕ ತಮಿಳು ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಈ ನಡುವೆ ಅವರು ತಮ್ಮ ಮದುವೆ ಫೋಟೊಗಳನ್ನು ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.
ಇದನ್ನು ನೋಡಿದವರು ನಟಿಗೆ ಮದುವೆಯಾಗಿದೆಯೇ? ಎಂಬ ಅನುಮಾನ ವ್ಯಕ್ತವಾಗಿದೆ. ಆದರೆ ಈ ಫೋಟೊಗಳನ್ನು ಜಾಹೀರಾತಿಗಾಗಿ ತೆಗೆದಿರುವುದಾಗಿ ಅವರು ತಿಳಿಸಿದ್ದಾರೆ ಎನ್ನಲಾಗಿದೆ.