ಬೆಂಗಳೂರು: ಮಾಸ್ತಿ ಗುಡಿ ಚಿತ್ರದ ಕ್ಲೈಮಾಕ್ಸ್ ದೃಶ್ಯದ ಚಿತ್ರೀಕರಣದಲ್ಲಿ ಇಬ್ಬರು ಖಳ ನಟರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ತಡರಾತ್ರಿ ತಾವರೆಕೆರೆ ಪೊಲೀಸರು ಚಿತ್ರ ನಿರ್ಮಾಪಕ ಸುಂದರ್ ಪಿ. ಗೌಡ ಅವರನ್ನು ಬಂಧಿಸಿದ್ದಾರೆ.
ಈ ಪ್ರಕರಣದಲ್ಲಿ ನಿರ್ದೇಶಕ ನಾಗಶೇಖರ್, ಸಾಹಸ ನಿರ್ದೇಶಕ ರವಿ ವರ್ಮಾ, ಯೂನಿಟ್ ಮ್ಯಾನೇಜರ್ ಭರತ್ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಆದರೆ ಇವರು ಸೋಮವಾರದಿಂದ ತಲೆಮರೆಸಿಕೊಂಡಿದ್ದು ಪೊಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ.
ತಿಪ್ಪೆಗೊಂಡನ ಹಳ್ಳಿ ಕೆರೆಯಲ್ಲಿ ಕಾರ್ಯಾಚರಣೆ ಮುಂದುವರಿದಿದ್ದು, ಚಿತ್ರತಂಡದ ಪೈಕಿ ನಾಯಕ ದುನಿಯಾ ವಿಜಿ ಮಾತ್ರ ಇದುವರೆಗೆ ಸ್ಥಳದಲ್ಲೇ ಇದ್ದು ಪೊಲೀಸರಿಗೆ ಮತ್ತು ಶೋಧ ಕಾರ್ಯ ನಡೆಸುತ್ತಿರುವವರಿಗೆ ಸಹಕರಿಸುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ