Webdunia - Bharat's app for daily news and videos

Install App

ಮೀಟೂ ಕಿರಿಕ್: ಕ್ಷಮೆ ಕೋರಿದ ಸಂಜನಾ; ಎಫ್ ಐಆರ್ ರದ್ದುಗೊಳಿಸಲು ಮನವಿ ಮಾಡಿದ ಶೃತಿ ಹರಿಹರನ್

Webdunia
ಬುಧವಾರ, 14 ನವೆಂಬರ್ 2018 (09:01 IST)
ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಬಿರುಗಾಳಿ ಎಬ್ಬಿಸಿದ್ದ ಮೀ ಟೂ ವಿವಾದ ತಣ್ಣಗಾಗುತ್ತಿದ್ದಂತೇ ಗಂಡ-ಹೆಂಡತಿ ಚಿತ್ರ ನಿರ್ದೇಶಕರ ಮೇಲೆ ಆರೋಪ ಮಾಡಿದ್ದ ನಟಿ ಸಂಜನಾ ಈಗ ಕ್ಷಮೆ ಕೋರಿದ್ದಾರೆ.

ಗಂಡ-ಹೆಂಡತಿ ಸಿನಿಮಾ ಚಿತ್ರೀಕರಣದ ವೇಳೆ ನಿರ್ದೇಶಕ ರವಿಶ್ರೀವತ್ಸ ತನ್ನ ಜತೆ ಅಸಭ್ಯವಾಗಿ ವರ್ತಿಸಿದರು ಎಂದು ಆರೋಪ ಮಾಡಿದ್ದ ನಟಿ ಸಂಜನಾ ಈಗ ಪತ್ರಿಕಾಗೋಷ್ಠಿ ನಡೆಸಿ ತನ್ನ ಆರೋಪಕ್ಕೆ ಕ್ಷಮೆ ಯಾಚಿಸಿದ್ದಾರೆ.

ನಿರ್ದೇಶಕರ ಸಂಘದ ಮೆಟ್ಟಿಲೇರಿದ್ದ ನಟಿ ಸಂಜನಾ ಹಿರಿಯರ ಮಧ್ಯಸ್ಥಿಕೆಯಲ್ಲಿ ರಾಜಿ ಮಾತುಕತೆ ನಂತರ ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕರ ಸಂಘದ ಅಧ್ಯಕ್ಷ ನಾಗೇಂದ್ರ ಪ್ರಸಾದ್ ಸಮ್ಮುಖದಲ್ಲಿ ಹಿರಿಯರ ಮಾತಿಗೆ ಬೆಲೆ ಕೊಟ್ಟು ನಿರ್ದೇಶಕರ ಕ್ಷಮೆ ಕೋರುತ್ತಿದ್ದೇನೆ. ಯಾರ ಮನಸ್ಸನ್ನೂ ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ. ನನಗಾದ ನೋವನ್ನು ಹಂಚಿಕೊಂಡಿದ್ದೆ ಅಷ್ಟೇ’ ಎಂದು ಹೇಳಿಕೆ ನೀಡಿದ್ದಾರೆ.

ಅತ್ತ, ನಟ ಅರ್ಜುನ್ ಸರ್ಜಾ ವಿರುದ್ಧ ಆರೋಪ ಮಾಡಿದ್ದ ಶೃತಿ ಹರಿಹರನ್ ತಮ್ಮ ಮೇಲೆ ಸರ್ಜಾ ದಾಖಲಿಸಿದ್ದ ಮಾನಹಾನಿ ಮೊಕದ್ದಮೆ ರದ್ದುಗೊಳಿಸುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ. ನನ್ನ ಮೇಲೆ ನಿರಾಧಾರ ಆರೋಪಗಳನ್ನು ದುರುದ್ದೇಶಪೂರ್ವಕವಾಗಿ ಹಾಕಲಾಗಿದೆ. ಎಫ್ ಐಆರ್ ನಲ್ಲಿ ದಾಖಲಾದಂತೆ ಯಾವ ಆರೋಪಗಳಲ್ಲೂ ನಾನು ಭಾಗಿಯಾಗಿಲ್ಲ. ಹೀಗಾಗಿ ಪ್ರಕರಣ ರದ್ದುಗೊಳಿಸಬೇಕೆಂದು ಅರ್ಜಿ ಸಲ್ಲಿಸಿದ್ದಾರೆ.















ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಹುನಿರೀಕ್ಷಿತ ಕೊತ್ತಲವಾಡಿ ಸಿನಿಮಾದ ಟ್ರೈಲರ್ ಬಿಡುಗಡೆ: ಆಕ್ಷನ್ ಲುಕ್‌ನಲ್ಲಿ ಮಿಂಚಿದ ಪೃಥ್ವಿ ಅಂಬರ್

ಇದೇ 24ರಂದು ವೀರಮಲ್ಲು ರಿಲೀಸ್‌, ರಾಜಕೀಯಕ್ಕಾಗಿ ದಿಟ್ಟ ನಿರ್ಧಾರ ಕೈಗೊಂಡ ಪವನ್ ಕಲ್ಯಾಣ್

ಮೀ ಟೂನಲ್ಲಿ ಸದ್ದು ಮಾಡಿದ್ದ ಬಾಲಿವುಡ್ ನಟಿ ತನುಶ್ರೀ ದತ್ತಾ ಈಗ ಕಣ್ಣೀರು ಹಾಕುತ್ತಿರುವುದೇಕೆ

ಡೆಂಗ್ಯೂ ಜ್ವರ: ಆಸ್ಪತ್ರೆಗೆ ದಾಖಲಾಗಿದ್ದ ನಟ ವಿಜಯ್ ದೇವರಕೊಂಡ ಡಿಸ್ಚಾರ್ಜ್‌

ಬಿಗ್ ಬಾಸ್ 12 ನಡೆಯೋದು ಈ ಹೊಸ ಲೊಕೇಶನ್ ನಲ್ಲಿ ಎಲ್ಲಿದೆ ಇದು

ಮುಂದಿನ ಸುದ್ದಿ
Show comments