Webdunia - Bharat's app for daily news and videos

Install App

ಗಂಡ ತೀರಿಕೊಂಡ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಕೈ ಮುಗಿದು ಬೇಡಿಕೊಂಡ ನಟಿ ಮೀನಾ

Webdunia
ಶನಿವಾರ, 2 ಜುಲೈ 2022 (10:00 IST)
ಚೆನ್ನೈ: ಮೊನ್ನೆಯಷ್ಟೇ ಪತಿ ವಿದ್ಯಾಸಾಗರ್ ಅನಾರೋಗ್ಯದಿಂದ ನಿಧನರಾದ ದುಃಖದಲ್ಲಿರುವ ನಟಿ ಮೀನಾ ಈಗ ಸೋಷಿಯಲ್ ಮೀಡಿಯಾದಲ್ಲಿ ಮಾಧ‍್ಯಮಗಳಿಗೆ ಮನವಿ ಮಾಡಿದ್ದಾರೆ.

ವಿದ್ಯಾಸಾಗರ್ ಅಕಾಲಿಕ ಸಾವಿಗೆ ಕಾರಣಗಳ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದವು. ಇದರ ಬೆನ್ನಲ್ಲೇ ನಟಿ ಖುಷ್ಬೂ ತಪ್ಪು ಮಾಹಿತಿ ಹಾಕಬೇಡಿ ಎಂದು ಮನವಿ ಮಾಡಿದ್ದರು. ವಿದ್ಯಾಸಾಗರ್ ಸಾವಿಗೆ ಕೊರೋನಾ ಕಾರಣವಲ್ಲ, ಶ್ವಾಸಕೋಶದ ಸೋಂಕು ಆಗಿತ್ತು ಎಂದಿದ್ದರು.

ಇದೀಗ ಮೀನಾ ಕೂಡಾ ಇದೇ ರೀತಿ ಮನವಿ ಮಾಡಿದ್ದಾರೆ. ನಾನು ನನ್ನ ಗಂಡನನ್ನು ಕಳೆದುಕೊಂಡ ನೋವಿನಲ್ಲಿದ್ದೇನೆ. ಹೀಗಾಗಿ ಮಾಧ್ಯಮಗಳು ನನ್ನ ದುಃಖ, ಖಾಸಗಿತನಕ್ಕೆ ಬೆಲೆ ಕೊಡಬೇಕು ಎಂದು ಮನವಿ ಮಾಡುತ್ತೇನೆ. ಅವರ ಸಾವಿನ ಬಗ್ಗೆ ತಪ್ಪು ಮಾಹಿತಿಯನ್ನು ಪ್ರಸಾರ ಮಾಡುವುದನ್ನು ನಿಲ್ಲಿಸಿ. ಈ ದುಃಖದ ಸಂದರ್ಭದಲ್ಲಿ ನಮ್ಮ ಜೊತೆಗೆ ನಿಂತು ಧೈರ್ಯ ತುಂಬಿದ ಎಲ್ಲರಿಗೂ, ನನ್ನ ಗಂಡನನ್ನು ಉಳಿಸಿಕೊಳ‍್ಳಲು ಪ್ರಯತ್ನ ನಡೆಸಿದ ವೈದ್ಯರ ತಂಡಕ್ಕೆ, ಸಹಕರಿಸಿದ ಮುಖ್ಯಮಂತ್ರಿಗಳು, ಆರೋಗ್ಯ ಮಂತ್ರಿಗಳು ಹಾಗೂ ಎಲ್ಲಾ ಸ್ನೇಹಿತರು, ಮಾಧ್ಯಮ ಮಿತ್ರರಿಗೆ ಧನ್ಯವಾದ ಸಲ್ಲಿಸುತ್ತೇನೆ’ ಎಂದು ಮೀನಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments