Select Your Language

Notifications

webdunia
webdunia
webdunia
webdunia

ಮಗನಿಗಾಗಿ ನಂಜನಗೂಡಿನ ನಂಜುಂಡೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಮೀನಾ ತೂಗುದೀಪ್‌

Actor Darshan Thoogudeep, Meena Thogudeep, Renukaswamy Case

Sampriya

ಮೈಸೂರು , ಬುಧವಾರ, 2 ಏಪ್ರಿಲ್ 2025 (17:00 IST)
Photo Courtesy X
ಮೈಸೂರು: ನಟ ದರ್ಶನ್ ಅವರ ತಾಯಿ ಮೀನಾ ತೂಗುದೀಪ್ ಅವರು ಇಂದು ನಂಜನಗೂಡಿನ ನಂಜುಂಡೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು.

ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ನಡೆಯುವ ವಿಚಾರಣೆ ಹಿನ್ನೆಲೆ ದರ್ಶನ್ ತಾಯಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ ಎನ್ನಲಾಗಿದೆ.

ನಂಜನಗೂಡಿನ ನಂಜುಂಡೇಶ್ವರನಿಗೆ ಮೀನಾ ತೂಗುದೀಪ ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಇತರರಿಗೆ ಹೈಕೋರ್ಟ್
ಜಾಮೀನು ನೀಡಿದೆ. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

ಈ ಹಿನ್ನೆಲೆ ಇಂದು ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಇದೇ ವೇಳೆ ದರ್ಶನ್ ತಾಯಿ ಟೆಂಪಲ್ ರನ್ ಮಾಡಿದ್ದಾರೆ. ಇನ್ನೂ ದರ್ಶನ್ ಅವರು ಸದ್ಯ ತಮ್ಮ ಮುಂದಿನ ಡೆವಿಲ್ ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

9ವರ್ಷಗಳ ನಂತರ ಬಾಲಿವುಡ್‌ಗೆ ವಾಪಾಸ್ಸಾದ ಪಾಕ್ ನಟ ಫವಾದ್ ಸಿನಿಮಾಗೆ ವಿರೋಧ