Publish Date: Wed, 28 Apr 2021 (12:24 IST)
Updated Date: Wed, 28 Apr 2021 (12:26 IST)
ಹೈದರಾಬಾದ್ : ಕೊರಟಾಲ ಶಿವ ನಿರ್ದೇಶನದ ಮೆಗಾಸ್ಟಾರ್ ಚಿರಂಜೀವಿ ಅವರ ಅಭಿನಯದ ಬಹುನಿರೀಕ್ಷೆಯ ಚಿತ್ರ ಆಚಾರ್ಯ ಬಿಡುಗಡೆ ದಿನವನ್ನು ಮುಂದೂಡಲಾಗಿದೆ.
ಪ್ರಸ್ತುತ ಕೊರೊನಾ ಸೋಂಕಿನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಬಿಡುಗಡೆಯ ದಿನಾಂಕವನ್ನು ಮತ್ತಷ್ಟು ಮುಂದೆ ತಳ್ಳುವುದು ಸೂಕ್ತವೆಂದು ನಿರ್ಮಾಪಕರು ಅಭಿಪ್ರಾಯ ಪಟ್ಟಿದ್ದಾರೆ. ಕೊರೊನಾ ಪ್ರಕರಣ ಸಾಮಾನ್ಯ ಸ್ಥಿತಿಗೆ ಬಂದಾಗ ಹೊಸ ಬಿಡುಗಡೆಯ ದಿನಾಂಕವನ್ನು ಘೋಷಿಸುವುದಾಗಿ ತಿಳಿಸಿದ್ದಾರೆ.
ಈಗಾಗಲೇ ಚಿತ್ರದ ಶೂಟಿಂಗ್ ಬಹುತೇಕ ಪೂರ್ಣಗೊಂಡಿದ್ದು, ನಿರ್ಮಾಣದ ಕೆಲಸಗಳು ಏಕಕಾಲದಲ್ಲಿ ನಡೆಯುತ್ತದೆ ಎಂದು ವರದಿಯಾಗಿದೆ.