Publish Date: Wed, 16 Aug 2023 (16:38 IST)
Updated Date: Wed, 16 Aug 2023 (16:40 IST)
ನವದೆಹಲಿ: ಮೆಗಾಸ್ಟಾರ್ ಚಿರಂಜೀವಿ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಮೊಣಕಾಲಿನ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ.
ಚಿರಂಜೀವಿಗೆ ಪದೇ ಪದೇ ಮೊಣಕಾಲಿನ ನೋವು ಕಾಣಿಸಿಕೊಳ್ಳುತ್ತಿತ್ತು. ಇದೀಗ ಅವರು ವೈದ್ಯರ ಸಲಹೆ ಮೇರೆಗೆ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ. ಮುಂದಿನ ಒಂದು ವಾರ ಕಾಲ ದೆಹಲಿಯಲ್ಲೇ ಇದ್ದು ವಿಶ್ರಾಂತಿ ಪಡೆಯಲಿದ್ದಾರೆ. ಬಳಿಕ ಹೈದರಾಬಾದ್ ಗೆ ಮರಳಲಿದ್ದಾರೆ.
ಮೆಗಾಸ್ಟಾರ್ ಶಸ್ತ್ರಚಿಕಿತ್ಸೆಗೊಳಗಾದ ಸುದ್ದಿ ಬಂದ ಬೆನ್ನಲ್ಲೇ ಫ್ಯಾನ್ಸ್ ಸೋಷಿಯಲ್ ಮೀಡಿಯಾ ಮೂಲಕ ಅವರು ಬೇಗನೇ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತಿದ್ದಾರೆ.