Webdunia - Bharat's app for daily news and videos

Install App

ನಟಿ ಮೇಘಾ ಶೆಟ್ಟಿಗೆ ಅನಾರೋಗ್ಯ, ಹೇಗಿದ್ದವರು ಹೇಗಾಗಿ ಹೋದರು

Krishnaveni K
ಬುಧವಾರ, 22 ಮೇ 2024 (16:47 IST)
Photo Courtesy: Instagram
ಬೆಂಗಳೂರು: ಜೊತೆ ಜೊತೆಯಲಿ ಧಾರವಾಹಿ ಮೂಲಕ ಕನ್ನಡ ಪ್ರೇಕ್ಷಕರ ಮನೆ ಮಗಳಾಗಿ ಬಣ್ಣದ ಲೋಕಕ್ಕೆ ಕಾಲಿಟ್ಟ ಮೇಘಾ ಶೆಟ್ಟಿ ಈಗ ಸ್ಯಾಂಡಲ್ ವುಡ್ ನಲ್ಲಿ ಮಿಂಚುತ್ತಿದ್ದಾರೆ. ಇದೀಗ ಅವರು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ ವಿಡಿಯೋ ನೋಡಿ ಇವರಿಗೇನಾಗಿ ಹೋಯ್ತು ಎಂದು ಫ್ಯಾನ್ಸ್ ಆತಂಕಪಡುವಂತಾಗಿದೆ.

ಮೇಘಾ ಶೆಟ್ಟಿ ತಮ್ಮ ಇನ್ ಸ್ಟಾ ಪುಟದಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು ಅವರ ಕಣ್ಣುಗಳು ಊದಿಕೊಂಡು ತೀರಾ ನಿತ್ರಾಣರಾಗಿ ಕಾಣುತ್ತಿದ್ದಾರೆ. ಹಾಗಿದ್ದರೂ ಶೂಟಿಂಗ್ ಸೆಟ್ ನಲ್ಲಿರುವುದಾಗಿ ಹಂಚಿಕೊಂಡಿದ್ದಾರೆ. ಅಷ್ಟಕ್ಕೂ ಮೇಘಾ ಶೆಟ್ಟಿಗೆ ಆಗಿದ್ದೇನು ಇಲ್ಲಿದೆ ವಿವರ.

ಸದ್ಯಕ್ಕೆ ಪ್ರಜ್ವಲ್ ದೇವರಾಜ್ ಜೊತೆ ಸಿನಿಮಾ ಮಾಡುತ್ತಿರುವ ಮೇಘಾ ಶೆಟ್ಟಿ ಶೂಟಿಂಗ್ ನಲ್ಲಿ ತೊಡಗಿಸಿಕೊಂಡಿದ್ದಾರೆ. ಈ ನಡುವೆ ಅವರಿಗೆ ತೀವ್ರ ಜ್ವರ ಕಾಣಿಸಿಕೊಂಡಿದೆಯಂತೆ. 103 ಡಿಗ್ರಿ ಜ್ವರವಿದ್ದರೂ ಮೇಕಪ್ ಹಾಕಿಕೊಂಡು ಶೂಟಿಂಗ್ ಗೆ ರೆಡಿಯಾಗಿದ್ದಾರೆ. 103 ಡಿಗ್ರಿ ಜ್ವರವಿರುವಾಗಲೂ ಮೇಕಪ್ ಹಾಕಿಕೊಂಡರೆ ಹೀಗೇ ಕಾಣಿಸೋದು ಎಂದು ವಿಡಿಯೋ ಹಂಚಿಕೊಂಡಿದ್ದಾರೆ.

ಇಷ್ಟೊಂದು ಜ್ವರವಿದ್ದಾಗಲೂ ನಟಿ ಶೂಟಿಂಗ್ ನಲ್ಲಿ ಭಾಗಿಯಾಗುತ್ತಿರುವುದು ಒಂದು ಕಡೆ ಅಭಿಮಾನಿಗಳಿಗೆ ಆತಂಕವಾದರೆ ಮತ್ತೊಂದು ಕಡೆ ಅವರ ಕರ್ತವ್ಯ ನಿಷ್ಠೆಗೆ ಮೆಚ್ಚುಗೆಯೂ ಇದೆ. ಕೊನೆಯದಾಗಿ ಮೇಘಾ ಶೆಟ್ಟಿ ಅಭಿನಯಿಸಿದ್ದ ಕೈವ ಸಿನಿಮಾ ಬಿಡುಗಡೆಯಾಗಿತ್ತು. ಇದೀಗ ಮತ್ತಷ್ಟು ಸಿನಿಮಾಗಳು ಶೂಟಿಂಗ್ ಹಂತದಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಒಂದು ಮಾತು ಎಲ್ಲವನ್ನೂ ನಿಭಾಯಿಸಬಹುದಿತ್ತು: ನಟಿ ರಮ್ಯಾ

ತುಳು ಸಿನಿಮಾಗೆ ಎಂಟ್ರಿ ಕೊಟ್ಟ ಬ್ಯಾಂಗಲ್ ಬಂಗಾರಿ ಖ್ಯಾತಿಯ ಆಂಟೋನಿ, ರೂಪೇಶ್ ಶೆಟ್ಟಿ ಸಿನಿಮಾಗೆ ಗಾಯನ

ಡಿ ಫ್ಯಾನ್ಸ್ ಅಶ್ಲೀಲ ಮೆಸೇಜ್‌: ಅಭಿಮಾನಿಗಳ ವಿರುದ್ಧ ಪೊಲೀಸ್ ಕಮಿಷನರ್‌ಗೆ ನಟಿ ರಮ್ಯಾ ದೂರು

₹72 ಕೋಟಿ ಆಸ್ತಿಯನ್ನು ಸಂಜಯ್‌ ದತ್‌ಗೆ ಬಿಟ್ಟು ಹೋದ ಮಹಿಳಾ ಅಭಿಮಾನಿ, ನಟ ಅದನ್ನೇನು ಮಾಡಿದ್ರೂ ಗೊತ್ತಾ

ಡಿ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌: ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ ಎಂದ ಪರಮೇಶ್ವರ್‌

ಮುಂದಿನ ಸುದ್ದಿ
Show comments