ಬೆಂಗಳೂರು: ಕಿರುತೆರೆ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿಕೊಟ್ಟು ಸ್ಯಾಂಡಲ್ ವುಡ್ ನಲ್ಲಿ ಬೇಡಿಕೆ ಸೃಷ್ಟಿಸಿರುವ ನಟಿ ಮೇಘಾ ಶೆಟ್ಟಿ ಈಗ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ.
ಪ್ರಜ್ವಲ್ ದೇವರಾಜ್ ನಾಯಕರಾಗಿರುವ ಹೊಸ ಸಿನಿಮಾದಲ್ಲಿ ಮೇಘಾ ಪ್ರಮುಖ ಪಾತ್ರ ಮಾಡಲಿದ್ದಾರೆ. ಇತ್ತೀಚೆಗಷ್ಟೇ ಸಿನಿಮಾದ ಮುಹೂರ್ತ ಕಾರ್ಯಕ್ರಮ ನೆರವೇರಿತ್ತು. ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ ಚೊಚ್ಚಲ ನಿರ್ದೇಶನದ ಸಿನಿಮಾ ಸಿನಿಮಾ ಇದಾಗಿದ್ದು ಚೀತಾ ಎಂದು ಟೈಟಲ್ ಇಡಲಾಗಿದೆ.
ಈ ಸಿನಿಮಾದಲ್ಲಿ ಶ್ರುತಿ ಹರಿಹರನ್ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಅವರ ಜೊತೆಗೆ ಮೇಘಾ ಕೂಡಾ ಅಭಿನಯಿಸಲಿದ್ದಾರೆ ಎಂಬ ಸುದ್ದಿ ಬಂದಿದೆ. ಸದ್ಯಕ್ಕೆ ಮೇಘಾ ನಟಿಸಿರುವ ಕೈವಾ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ.