Photo Courtesy: Instagram
ಬೆಂಗಳೂರು: ಜೊತೆ ಜೊತೆಯಲಿ ಧಾರವಾಹಿ ಮೂಲಕ ಪ್ರವರ್ಧಮಾನಕ್ಕೆ ಬಂದಿದ್ದ ನಟಿ ಮೇಘಾ ಶೆಟ್ಟಿ ಈಗ ಸ್ಯಾಂಡಲ್ ವುಡ್ ನಲ್ಲೂ ಬೇಡಿಕೆ ಹೊಂದಿದ್ದಾರೆ.
ಜೊತೆ ಜೊತೆಯಲಿ ಧಾರವಾಹಿ ಸದ್ಯದಲ್ಲೇ ಮುಕ್ತಾಯವಾಗುತ್ತಿರುವ ಸುದ್ದಿ ಬಂದಿದೆ. ಇದರ ಬೆನ್ನಲ್ಲೇ ಮೇಘಾ ಸಿನಿಮಾಗಳಲ್ಲಿ ಬ್ಯುಸಿಯಾಗಲಿದ್ದಾರೆ.
ಈಗಾಗಲೇ ಕೆಲವು ಸ್ಕ್ರಿಪ್ಟ್ ಕೇಳಿದ್ದು ಮುಂದಿನ ವಾರವೇ ಹೊಸ ಸಿನಿಮಾ ಘೋಷಣೆಯಾಗುವ ಸಾಧ‍್ಯತೆಯಿದೆ. ಹೀಗಾಗಿ ಧಾರವಾಹಿ ಮುಕ್ತಾಯವಾದ ಬೆನ್ನಲ್ಲೇ ಮೇಘಾ ಹಿರಿತೆರೆಯಲ್ಲಿ ಬ್ಯುಸಿಯಾಗಲಿದ್ದಾರೆ.