Select Your Language

Notifications

webdunia
webdunia
webdunia
webdunia

ಸಿನಿರಂಗದ ಧ್ರುವತಾರೆ ಎಂದು ಕೊಂಡಾಡಿದ ನರೇಂದ್ರ ಮೋದಿಗೆ ಧನ್ಯೋಸ್ಮಿ ಎಂದ ಮೋಹನ್‌ಲಾಲ್‌

Dadasaheb Phalke Award, Superstar Mohanlal, Prime Minister Narendra Modi

Sampriya

ನವದೆಹಲಿ , ಭಾನುವಾರ, 21 ಸೆಪ್ಟಂಬರ್ 2025 (11:23 IST)
Photo Credit X
ನವದೆಹಲಿ: 2023 ರ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಸ್ವೀಕರಿಸಲಿರುವ ಮಲಯಾಳಂ ಸೂಪರ್‌ಸ್ಟಾರ್ ಮೋಹನ್ ಲಾಲ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಭಿನಂದಿಸಿದ್ದಾರೆ, ಅವರನ್ನು ಮಲಯಾಳಂ ಸಿನಿರಂಗದ ಧ್ರುವತಾರೆ ಎಂದು ಬಣ್ಣಿಸಿದ್ದಾರೆ. 

ಇದಕ್ಕೆ ಕೃತಜ್ಞತೆ ಸಲ್ಲಿಸಿರುವ ಮೋಹನ್‌ಲಾಲ್‌, ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಸ್ವೀಕರಿಸಲು ನನಗೆ ತುಂಬಾ ಸಂತೋಷವಾಗಿದೆ. ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರೇ, ನಿಮ್ಮ ಪ್ರೀತಿಯ ಮಾತುಗಳು ಮತ್ತು ಆಶೀರ್ವಾದಗಳಿಗಾಗಿ ನಾನು ಅವರಿಗೆ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ನಿಮ್ಮ ಮಾತುಗಳು ಮತ್ತಷ್ಟು ಹುರುಪು ತುಂಬಿದೆ. ನನ್ನ ಸಿನಿಮಾ ಜೀವನದಲ್ಲಿ ಬೆಂಬಲವಾಗಿ ನಿಂತ ಎಲ್ಲರಿಗೂ ಧನ್ಯವಾದ ಎಂದು ಬರೆದುಕೊಂಡಿದ್ದಾರೆ.

ಮಲಯಾಳಂ ಸೂಪರ್‌ಸ್ಟಾರ್ ಮೋಹನ್ ಲಾಲ್ ಅವರನ್ನು 2023 ರ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಭಾರತೀಯ ಚಿತ್ರರಂಗಕ್ಕೆ ಅವರ ಗಮನಾರ್ಹ ಕೊಡುಗೆಯನ್ನು ಗುರುತಿಸಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಈ ಗೌರವವನ್ನು ಘೋಷಿಸಿದೆ. 

ಸೆಪ್ಟೆಂಬರ್ 23, 2025 ರಂದು ನಡೆಯಲಿರುವ 71 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಅವರು ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. ಈ ಪ್ರಶಸ್ತಿ ಘೋಷಣೆ ಬೆನ್ನಲ್ಲೇ ಮೋಹನ್‌ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಹರ್ಷ ವ್ಯಕ್ತಪಡಿಸಿದ್ದಾರೆ.

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಸ್ವೀಕರಿಸಲು ನನಗೆ ತುಂಬಾ ಸಂತೋಷವಾಗಿದೆ. ಈ ಗೌರವ ನನಗೊಬ್ಬನಿಗಲ್ಲ, ಈ ಪ್ರಯಾಣದಲ್ಲಿ ನನ್ನೊಂದಿಗೆ ನಡೆದ ಪ್ರತಿಯೊಬ್ಬ ವ್ಯಕ್ತಿಗೂ ಸೇರಿದೆ ಎಂದು ಹೇಳಿದ್ದಾರೆ. ನನ್ನ ಕುಟುಂಬ, ಪ್ರೇಕ್ಷಕರು, ಸಹೋದ್ಯೋಗಿಗಳು, ಸ್ನೇಹಿತರು ಮತ್ತು ಹಿತೈಷಿಗಳ ಪ್ರೀತಿ, ನಂಬಿಕೆ ಮತ್ತು ಪ್ರೋತ್ಸಾಹವು ನನ್ನ ದೊಡ್ಡ ಶಕ್ತಿಯಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ತಾಯ್ತನದ ಖುಷಿಯಲ್ಲಿ ತೇಲಾಡುತ್ತಿರುವ ಭಾವನಾ: ಕಂದಮ್ಮನ ಕುರಿತು ಮೊದಲ ಪೋಸ್ಟ್ ಹಂಚಿಕೊಂಡ ನಟಿ