ಬೆಂಗಳೂರು: ಡಾಲಿ ಧನಂಜಯ್-ರಚಿತಾ ರಾಮ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ಮಾನ್ಸೂನ್ ರಾಗ ಸಿನಿಮಾ ರಿಲೀಸ್ ದಿನಾಂಕ ಮತ್ತೆ ಮುಂದೂಡಿಕೆಯಾಗಿದೆ.
ಸುಮಧುರ ಹಾಡುಗಳಿಂದ, ವಿಶಿಷ್ಟ ಟ್ರೈಲರ್ ನಿಂದ ಗಮನ ಸೆಳೆದಿರುವ ಮಾನ್ಸೂನ್ ರಾಗ ಸಿನಿಮಾ ಆಗಸ್ಟ್ 19 ಕ್ಕೆ ಬಿಡುಗಡೆ ದಿನಾಂಕ ಘೋಷಿಸಿತ್ತು. ಆದರೆ ಕೆಲವು ತಾಂತ್ರಿಕ ಕಾರಣಗಳಿಂದಾಗಿ ಸಿನಿಮಾ ರಿಲೀಸ್ ಮುಂದೂಡಿಕೆಯಾಗಿದ್ದು, ಹೊಸ ದಿನಾಂಕ ಶೀಘ್ರದಲ್ಲೇ ಪ್ರಕಟಿಸುವುದಾಗಿ ಚಿತ್ರತಂಡ ಪ್ರಕಟಿಸಿದೆ.
ಇದಕ್ಕೂ ಮೊದಲು ಚಿತ್ರತಂಡ ವರಮಹಾಲಕ್ಷ್ಮಿ ಹಬ್ಬದ ಸಂದರ್ಭ ಚಿತ್ರ ಬಿಡುಗಡೆ ಮಾಡಲು ತಯಾರಿ ನಡೆಸಿತ್ತು. ಆದರೆ ಅದು ಸಾಧ‍್ಯವಾಗಿರಲಿಲ್ಲ.