Publish Date: Thu, 04 May 2023 (16:22 IST)
Updated Date: Thu, 04 May 2023 (16:24 IST)
ಬೆಂಗಳೂರು: ಕಾಂಗ್ರೆಸ್ ಅಭ್ಯರ್ಥಿಗಳ ಪರ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ತೊಡಗಿಸಿಕೊಂಡಿರುವ ಶಿವರಾಜ್ ಕುಮಾರ್ ಗೆ ಸಂಸದ ಪ್ರತಾಪ್ ಸಿಂಹ ಟಾಂಗ್ ಕೊಟ್ಟಿದ್ದಾರೆ.
ಪತ್ನಿ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಗೆ ಸೇರ್ಪಡೆಯಾದ ಬೆನ್ನಲ್ಲೇ ಶಿವಣ್ಣ ಕಾಂಗ್ರೆಸ್ ಅಭ್ಯರ್ಥಿಗಳ ಪರ ಸ್ಟಾರ್ ಪ್ರಚಾರಕರಾಗಿ ಕೆಲಸ ಮಾಡುತ್ತಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುತ್ತಿರುವ ವರುಣಾ ಕ್ಷೇತ್ರದಲ್ಲೂ ಶಿವಣ್ಣ ಪ್ರಚಾರ ನಡೆಸಿದ್ದಾರೆ.
ವರುಣಾದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸೋಮಣ್ಣ ಸ್ಪರ್ಧಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಶಿವಣ್ಣಗೆ ಟಾಂಗ್ ಕೊಟ್ಟಿದ್ದಾರೆ. ಈ ಹಿಂದೆ ಪುನೀತ್ ಹೆಸರಿನಲ್ಲಿ ಬಡವರಿಗಾಗಿ ಆಸ್ಪತ್ರೆ ಕಟ್ಟಿದ್ದ ಸೋಮಣ್ಣ. ಮನಮೆಚ್ಚಿ ಶ್ಲಾಘಿಸಿದ್ದು ರಾಘಣ್ಣ. ಸಿದ್ರಾಮಣ್ಣ ಪರವಾಗಿ ಪ್ರಚಾರಕ್ಕೆ ಇಳಿದ ಶಿವಣ್ಣ. ಅವರವರ ಭಾವ ಭಕುತಿಗೆ ಎಂದು ಟಾಂಗ್ ಕೊಟ್ಟಿದ್ದಾರೆ.