Webdunia - Bharat's app for daily news and videos

Install App

ಬಹುನಿರೀಕ್ಷಿತ ಭೈರತಿ ರಣಗಲ್ ಸಿನಿಮಾದ ಟ್ರೈಲರ್ ರಿಲೀಸ್‌, ಶಿವಣ್ಣ ಲುಕ್‌ಗೆ ಅಭಿಮಾನಿಗಳು ಫಿದಾ

Sampriya
ಮಂಗಳವಾರ, 5 ನವೆಂಬರ್ 2024 (18:19 IST)
Photo Courtesy X
ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ 'ಭೈರತಿ ರಣಗಲ್' ಸಿನಿಮಾದ ಟ್ರೈಲರ್ ಬಿಡುಗಡೆ ಆಗಿದೆ. 2017 ರಲ್ಲಿ ಬಿಡುಗಡೆ ಆಗಿದ್ದ 'ಮಫ್ತಿ' ಸಿನಿಮಾದ ಪಾತ್ರವಾದ ಭೈರತಿ ರಣಗಲ್ ಪಾತ್ರವನ್ನು ಪ್ರಧಾನವಾಗಿಟ್ಟುಕೊಂಡು ಈ ಸಿನಿಮಾ ಮಾಡಿದ್ದು, ಈಗಾಗಲೇ ಸಾಕಷ್ಟು ನಿರೀಕ್ಷೆಯನ್ನು ಮೂಡಿಸಿದೆ.   ಇಂದು ಬಿಡುಗಡೆಯಾದ ಟ್ರೈಲರ್‌ನಲ್ಲಿ ಶಿವಣ್ಣ ಅವರ ಬೇರೆ ಬೇರೆ ಶೇಡ್‌ನ ಲುಕ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಟ್ರೈಲರ್​ನಲ್ಲಿ ಶಿವಣ್ಣ ಸಖತ್ ಆಗಿ ಕಾಣಿಸಿಕೊಂಡಿದ್ದಾರೆ. ಮಚ್ಚು ಹಿಡಿದು ದುಷ್ಟ ಸಂಹಾರಿಸಿರುವುದನ್ನು ಕಾಣಬಹುದು.

ಶಿವಣ್ಣ ಪಾತ್ರದೊಂದಿಗೆ ಬೇರೆ ಕೆಲವು ಪಾತ್ರಗಳನ್ನು ತೋರಿಸಲಾಗಿದೆ. ಅದರಲ್ಲಿ ಬಾಲಿವುಡ್ ನಟ ರಾಹುಕಲ್ ಭೋಸ್‌, ಶಿವಣ್ಣನ ಸಹೋದರಿಯ ಪಾತ್ರ ನಿರ್ವಹಿಸಿರುವ ಛಾಯಾ ಸಿಂಗ್​ ಸಹ ಟ್ರೈಲರ್​ನಲ್ಲಿ ಹೆಚ್ಚು ಕಾಣುತ್ತಾರೆ. ನಾಯಕಿ ರುಕ್ಮಿಣಿ ವಸಂತ್ ಹೀಗೆ ಬಂದು ಹಾಗೆ ಹೊರಟುಬಿಡುತ್ತಾರೆ. ಅವಿನಾಶ್ ಹಾಗೂ ಇನ್ನೂ ಕೆಲ ಪಾತ್ರಗಳು ಟ್ರೈಲರ್​ನಲ್ಲಿ ಕಾಣುತ್ತವೆ.

ಭೈರತಿ ರಣಗಲ್ ಸಿನಿಮಾ ಇದೇ 15ರಂದು ಬಿಡುಗಡೆಯಾಗಲಿದ್ದು, ಸಿನಿಮಾಗೆ ಶಿವರಾಜ್‌ಕುಮಾರ್ ಹಾಗೂ ಗೀತಾ ಅವರು ಬಂಡವಾಳ ಹೂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments