Select Your Language

Notifications

webdunia
webdunia
webdunia
webdunia

ಬಹುಕೋಟಿ ವಂಚನೆ ಪ್ರಕರಣ: ನಟ ಧ್ರುವ ಸರ್ಜಾಗೆ ಬಿಗ್ ರಿಲೀಫ್‌

ನಟ ಧ್ರುವ ಸರ್ಜಾ

Sampriya

ಬೆಂಗಳೂರು , ಬುಧವಾರ, 10 ಸೆಪ್ಟಂಬರ್ 2025 (16:21 IST)
ಬೆಂಗಳೂರು: ಕನ್ನಡದ ಖ್ಯಾತ ನಟ ಧ್ರುವ ಸರ್ಜಾ ವಿರುದ್ಧ ಮುಂಬೈನಲ್ಲಿ ದಾಖಲಾಗಿದ್ದ ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಿಗ್ ರಿಲೀಫ್ ಸಿಕ್ಕಿದೆ. 

ಮಾಸ್ ನಟ ಧ್ರುವ ಸರ್ಜಾ ಅವರ ವಿರುದ್ಧ ಮುಂಬೈನಲ್ಲಿ ಬಹುಕೋಟಿ ವಂಚನೆ ಪ್ರಕರಣ ದಾಖಲಾಗಿತ್ತು. ನಿರ್ಮಾಪಕ ರಾಘವೇಂದ್ರ ಹೆಗಡೆ ಎಂಬುವರು ಮುಂಬೈನಲ್ಲಿ ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲಿಸಿದ್ದರು. ಪೊಲೀಸರು ಧ್ರುವ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಿಕೊಂಡಿದ್ದರು. ಆದರೆ ಇದೀಗ ನ್ಯಾಯಾಲಯದ ಆದೇಶವು ಪ್ರಕರಣದಲ್ಲಿ ಧ್ರುವ ಸರ್ಜಾ ಅವರಿಗೆ ತಾತ್ಕಾಲಿಕ ರಿಲೀಫ್ ನೀಡಿದೆ.

ಪ್ರಕರಣದ ಸಂಬಂಧ ಧ್ರುವ ಸರ್ಜಾ ಪರ ವಕೀಲರು ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿರುವ ನ್ಯಾಯಾಲಯ ಧ್ರುವ ವಿರುದ್ಧ ಆರೋಪ ಪಟ್ಟಿ ಸಲ್ಲಿಸದಂತೆ ಪೊಲೀಸರಿಗೆ ಸೂಚಿಸಿದೆ. ಅದಲ್ಲದೆ ಇದೊಂದು ಸಿವಿಲ್ ಮೊಕದ್ದಮೆ ಆಗಿದ್ದು ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ ಎಂದು ಸಹ ಅಭಿಪ್ರಾಯ ವ್ಯಕ್ತಪಡಿಸಿದೆ. 

ಧ್ರುವ ಸರ್ಜಾ ಅವರು, ಸಿನಿಮಾ ಮಾಡಿಕೊಡುವುದಾಗಿ ಹೇಳಿ 3.10 ಕೋಟಿ ರೂಪಾಯಿ ಹಣ ಪಡೆದು, ಸಿನಿಮಾ ಮಾಡಲು ಡೇಟ್ಸ್ ನೀಡದೆ ವಂಚನೆ ಮಾಡಿದ್ದಾರೆ ಎಂದು ರಾಘವೇಂದ್ರ ಹೆಗಡೆ ಎಂಬುವರು ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಆಗಸ್ಟ್ ತಿಂಗಳ ಆರಂಭದಲ್ಲಿ ದೂರು ದಾಖಲಿಸಿದ್ದರು. 

ದೂರಿನ ಆಧಾರದಲ್ಲಿ ಪೊಲೀಸರು ಧ್ರುವ ಸರ್ಜಾ ವಿರುದ್ಧ ಎಫ್​​ಐಆರ್ ದಾಖಲು ಮಾಡಿದ್ದರು.

ಆದರೆ ನ್ಯಾಯಾಲಯವು, ಮುಂದಿನ ವಿಚಾರಣೆ ವರೆಗೆ ಮಾತ್ರವೇ ಆರೋಪ ಪಟ್ಟಿ ಸಲ್ಲಿಸದಂತೆ ಪೊಲೀಸರಿಗೆ ಸೂಚಿಸಿದೆ.

ರಾಘವೇಂದ್ರ ಹೆಗಡೆ ಎಂಬುವರು ನೀಡಿರುವ ದೂರಿನ ಅನ್ವಯ, 2018 ರಲ್ಲಿ ಧ್ರುವ ಸರ್ಜಾ ಅವರು ‘ಸೋಲ್ಜರ್’ ಹೆಸರಿನ ಸಿನಿಮಾ ಮಾಡಲು ಮುಂಗಡವಾಗಿ 3 ಕೋಟಿ ರೂಪಾಯಿ ಹಣ ಪಡೆದಿದ್ದರು ಎನ್ನಲಾಗಿದೆ. 

ರಾಘವೇಂದ್ರ ಅವರು ಅದನ್ನು ವಿವಿಧೆಡೆ ಸಾಲ ಮಾಡಿ ಧ್ರುವ ಅವರಿಗೆ ನೀಡಿದ್ದರಂತೆ. 

ಆ ಬಳಿಕ ಸಿನಿಮಾದ ಚಿತ್ರಕತೆ ಬರೆಯುವವರಿಗೆ ಮತ್ತು ಪ್ರಚಾರಕ್ಕೆಂದು 28 ಲಕ್ಷ ರೂಪಾಯಿ ಪಡೆದರಂತೆ. ಆರಂಭದಲ್ಲಿ ಚಿತ್ರಕತೆ ಮಾತುಕತೆ ವಿಚಾರವಾಗಿ ಸಂಪರ್ಕದಲ್ಲಿದ್ದ ಧ್ರುವ ಸರ್ಜಾ ಆ ಬಳಿಕ ರಾಘವೇಂದ್ರ ಅವರ ಸಂಪರ್ಕಕ್ಕೆ ಸಿಗಲಿಲ್ಲವಂತೆ. ಸಿನಿಮಾ ಡೇಟ್ಸ್​ ಸಹ ನೀಡಲಿಲ್ಲವಂತೆ. ಇದೇ ಕಾರಣಕ್ಕೆ ರಾಘವೇಂದ್ರ ಅವರು ಧ್ರುವ ವಿರುದ್ಧ ವಂಚನೆ ಪ್ರಕರಣದಡಿಯಲ್ಲಿ ದೂರು ದಾಖಲಿಸಿದ್ದಾರೆ.

ಆದರೆ ಧ್ರುವ ಸರ್ಜಾ ಅವರ ಆಪ್ತರು ಈ ಆರೋಪವನ್ನು ತಳ್ಳಿ ಹಾಕಿದ್ದು, 2018 ರಲ್ಲಿ ರಾಘವೇಂದ್ರ ಅವರು ಸಿನಿಮಾ ಮಾಡಲು ಬಂದಿದ್ದು, ಹಾಗೂ ಅಡ್ವಾನ್ಸ್ ನೀಡಿದ್ದು ಸತ್ಯವೇ ಆದರೆ ನಾವು ಅವರನ್ನು ದೂರ ತಳ್ಳಿಲ್ಲ. ಅವರು ತೆಲುಗು ಹಾಗೂ ತಮಿಳಿನಲ್ಲಿ ಸಿನಿಮಾ ಮಾಡೋಣ ಎಂದರು, ಧ್ರುವ ಸರ್ಜಾ ಅವರು ಕನ್ನಡದಲ್ಲಿಯೇ ಸಿನಿಮಾ ಮಾಡೋಣ ಎಂದು ಹೇಳಿದರು. ಆ ಬಳಿಕ ಅವರೇ ನಮ್ಮ ಸಂಪರ್ಕದಿಂದ ದೂರ ಹೋಗಿದ್ದರು. 


Share this Story:

Follow Webdunia kannada

ಮುಂದಿನ ಸುದ್ದಿ

ಐಶ್ವರ್ಯ ರೈ ಬೆನ್ನಲ್ಲೇ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ ಅಭಿಷೇಕ್​ ಬಚ್ಚನ್: ಕಾರಣ ಏನು ಗೊತ್ತಾ