Publish Date: Wed, 05 Aug 2026 (15:01 IST)
Updated Date: Wed, 05 Aug 2026 (15:09 IST)
ಮುಂಬೈ: ಕನ್ನಡ ಸೇರಿದಂತೆ ಹಲವು ಭಾಷೆಗಳ ಸಿನಿಮಾಗಳಲ್ಲಿ ಖಳನಾಯಕನಾಗಿ ಮಿಂಚಿದ್ದ ಪ್ರದೀಪ್ ರಾವತ್ ಅವರು ನಿಧನರಾಗಿದ್ದಾರೆ. ಈ ಮಾಹಿತಿಯನ್ನ ಸಹನಟ ಯಶ್‌ಪಾಲ್ ಶರ್ಮಾ ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಕಳೆದ ಹಲವು ತಿಂಗಳುಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಕನ್ನಡದ ಗಜ, ತಮಿಳಿನ ಗಜಿನಿ, ತೆಲುಗಿನ ಸೈ ಸೇರಿದಂತೆ ಹಲವು ಚಿತ್ರಗಳಲ್ಲಿ ಅವರು ಅಭಿನಯಿಸಿದ್ದರು.
ನಮ್ಮ ಗಜಿನಿ, ಲಾಗಾನ್ ಚಿತ್ರದ ದೇವಾ ಪ್ರದೀಪ್ ರಾವತ್ ಇನ್ನು ನಮ್ಮೊಂದಿಗಿಲ್ಲ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಯಶ್‌ಪಾಲ್ ಶರ್ಮಾ ಬರೆದು ಸಂತಾಪ ಸೂಚಿಸಿದ್ದಾರೆ.
ರಾವತ್ ಅವರು ದೀರ್ಘಕಾಲದಿಂದ ಕ್ಯಾನ್ಸರ್ ಚಿಕಿತ್ಸೆ ಪಡೆಯುತ್ತಿದ್ದರು. ಆರಂಭದಲ್ಲಿ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದ ಅವರು, ನಂತರ ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸಲ್ಪಟ್ಟಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ.
ಪ್ರದೀಪ್ ರಾವತ್ ಅವರು ತಮ್ಮ ಅಭಿನಯ ಜೀವನವನ್ನ ಬಿ.ಆರ್. ಚೋಪ್ರಾ ನಿರ್ದೇಶನದ ಜನಪ್ರಿಯ ದೂರದರ್ಶನ ಧಾರಾವಾಹಿ ಮಹಾಭಾರತ ದಲ್ಲಿ ಅಶ್ವತ್ಥಾಮ ಪಾತ್ರದ ಮೂಲಕ ಆರಂಭಿಸಿದ್ದರು. ಬಳಿಕ ತಹಕಿಕಾತ್, ಚಂದ್ರಕಾಂತಾ, ಯುಗ್, ಗುಲ್ ಸನೋಬರ್ ಸೇರಿದಂತೆ ಹಲವು ಧಾರಾವಾಹಿಗಳಲ್ಲೂ ಅಭಿನಯಿಸಿದರು.
ಬಾಲಿವುಡ್ ಮಾತ್ರವಲ್ಲದೆ ತಮಿಳು, ತೆಲುಗು, ಕನ್ನಡ ಹಾಗೂ ಮಲಯಾಳಂ ಚಿತ್ರರಂಗಗಳಲ್ಲಿಯೂ ಪ್ರದೀಪ್ ರಾವತ್ ಅವರು ತಮ್ಮದೇ ಆದ ಛಾಪು ಮೂಡಿಸಿದ್ದರು. ಕನ್ನಡದಲ್ಲಿ ಗಜ ಸಿನಿಮಾದಲ್ಲಿ ದರ್ಶನ್ ಎದುರು ಖಳನಾಯಕನ ಪಾತ್ರದಲ್ಲಿ ಮಿಂಚಿದ್ದರು.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ