Webdunia - Bharat's app for daily news and videos

Install App

ಕೊಲೆ ಪ್ರಕರಣ: ನಟ ದರ್ಶನ್‌ ಸೇರಿದಂತೆ 13 ಆರೋಪಿಗಳು ಪೊಲೀಸ್‌ ಕಸ್ಟಡಿಗೆ

Sampriya
ಮಂಗಳವಾರ, 11 ಜೂನ್ 2024 (19:13 IST)
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತವಾಗಿರುವ ನಟ ದರ್ಶನ್‌ ಅವರನ್ನು ಇಂದು ಸಂಜೆ ಮ್ಯಾಜಿಸ್ಟೇಟ್‌ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಈ ವೇಳೆ ಹೆಚ್ಚಿನ ವಿಚಾರಣೆಗೆ ನಟ ದರ್ಶನ್‌ ಅವರನ್ನು ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ.

ನ್ಯಾಯಾಧೀಶರ ಎದುರು ಹಾಜರಾದ ದರ್ಶನ್‌ ಅವರು ಪ್ರಶ್ನೆಗಳಿಗೆ ಉತ್ತರಿಸುತ್ತ ಕಣ್ಣೀರು ಹಾಕಿದ್ದಾರೆ. ಪವಿತ್ರಾ ಗೌಡ ಕೂಡ ಕಣ್ಣೀರು ಸುರಿಸಿದ್ದಾರೆ. ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಪೊಲೀಸರು ಕೇಳಿಕೊಂಡಿದ್ದು, ಅದರಂತೆ ಬಂಧಿತ 13 ಆರೋಪಿಗಳನ್ನು ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ.

ಕೊಲೆ ಕೇಸ್​ನಲ್ಲಿ ನಟಿ ಪವಿತ್ರಾ ಗೌಡ ಎ 1 ಆರೋಪಿಯಾಗಿದ್ದು, ನಟ ದರ್ಶನ್​ ಎ 2 ಆರೋಪಿಯಾಗಿದ್ದಾರೆ. ಸಹಚರ ಕೆ. ಪವನ್​ ಎ 3 ಆಗಿದ್ದಾನೆ. ಬೌರಿಂಗ್​ ಆಸ್ಪತ್ರೆಯಲ್ಲಿ ಎಲ್ಲ 13 ಆರೋಪಿಗಳ ವೈದ್ಯಕೀಯ ಪರೀಕ್ಷೆ ಮಾಡಿಸಲಾಗಿದೆ.  

ದರ್ಶನ್‌ ಸ್ನೇಹಿತ ವಿ.ವಿನಯ್, ದರ್ಶನ್‌ ಮ್ಯಾನೇಜರ್‌ ಆರ್.ನಾಗರಾಜು, ಎಂ.ಲಕ್ಷ್ಮಣ್​, ಎಸ್​.ಪ್ರದೋಶ್​, ದೀಪಕ್​ ಕುಮಾರ್, ನಂದೀಶ್​, ಕಾರ್ತಿಕ್​, ನಿಖಿಲ್ ನಾಯಕ್​, ಕೇಶವಮೂರ್ತಿ, ರಾಘವೇಂದ್ರ ಅಲಿಯಾಸ್​ ರಾಘು ಬಂಧಿತ ಇತರೆ ಆರೋಪಿಗಳು. ಬಂಧಿತರ ಪೈಕಿ ಹೆಚ್ಚಿನವರು ದರ್ಶನ್‌ ಅವರ ಬಾಡಿಗಾರ್ಡ್‌ ಆಗಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾದಲ್ಲಿ ನೀತಿ ಪಾಠ ಹೇಳಿದ್ರೆ ಸಾಲದು ಎಂದ ರಾಕ್ ಲೈನ್ ವೆಂಕಟೇಶ್ ಬುದ್ಧಿ ಹೇಳಿದ್ರೆ ದರ್ಶನ್ ಫ್ಯಾನ್ಸ್ ಹೇಳಿದ್ದೇನು

ಭಾವ ಬಂದರೋ ಹಾಡಿಗೆ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್: ವಿಡಿಯೋ

ದರ್ಶನ್ ಸರ್ ಜೊತೆ ನಾನಿದ್ದೇನೆ ಎಂದ ಧ್ರುವ ಸರ್ಜಾ: ಕೆಡಿ ನೋಡಲಿ ಅಂತಾನಾ ಎಂದ ಡಿಬಾಸ್ ಫ್ಯಾನ್ಸ್

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಮುಂದಿನ ಸುದ್ದಿ
Show comments