Select Your Language

Notifications

webdunia
webdunia
webdunia
webdunia

ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಆರೋಗ್ಯದಲ್ಲಿ ಏರುಪೇರು ; ಅಪೋಲೋ ಆಸ್ಪತ್ರೆಗೆ ದಾಖಲು

ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಆರೋಗ್ಯದಲ್ಲಿ ಏರುಪೇರು ; ಅಪೋಲೋ ಆಸ್ಪತ್ರೆಗೆ ದಾಖಲು
ಬೆಂಗಳೂರು , ಬುಧವಾರ, 11 ಏಪ್ರಿಲ್ 2018 (07:37 IST)
ಬೆಂಗಳೂರು : ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರಿಗೆ ಎದೆ, ಕಾಲು ನೋವು ಕಾಣಿಸಿಕೊಂಡ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


ಸರಿಗಮಪ ಕಾರ್ಯಕ್ರಮದ ಶೂಟಿಂಗ್ ವೇಳೆ ಈ ಘಟನೆ ಸಂಭವಿಸಿದ ಕಾರಣ ಅವರನ್ನು ತಕ್ಷಣ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆಯ ನಂತರ ಇದೀಗ ಅವರು ಚೇತರಿಸಿಕೊಂಡಿದ್ದಾರೆ.  ಹಂಸಲೇಖ ಅವರು ಸಿನಿಮಾವೊಂದನ್ನು  ನಿರ್ದೇಶಿಸುತ್ತಿದ್ದ ಕಾರಣ  ಚಿತ್ರೀಕರಣಕ್ಕಾಗಿ ಸೋಮವಾರ  ಸಿನಿಮಾ ಲೊಕೇಷನ್ ಹುಡುಕಾಡಿದ್ದರಿಂದ ಆಯಾಸಗೊಂಡಿದ್ದರಿಂದ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಸದ್ಯ ಚಿಕಿತ್ಸೆ ನೀಡಿ ವಾರ್ಡ್‌ಗೆ ಶಿಫ್ಟ್ ಮಾಡಲಾಗಿದೆ. ಅವರ ಆರೋಗ್ಯ ಚೆನ್ನಾಗಿದೆ. ಆದಷ್ಟು ಬೇಗ ಮನೆಗೆ ಕರೆದುಕೊಂಡು ಹೋಗಲಾಗುತ್ತೆ. ಅಲ್ಲದೇ ಈ ವಿಚಾರವಾಗಿ ಗಾಸಿಪ್ ಮಾಡಬೇಡಿ ಎಂದು ಹಂಸಲೇಖ ಅವರ ಪುತ್ರ ಅಲಂಕಾರ್ ಅವರು ಮನವಿಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪದ್ಮಾವತ್ ಚಿತ್ರದ ಅಲ್ಲಾವುದ್ಧೀನ್ ಖಿಲ್ಜಿ ಪಾತ್ರಕ್ಕೆ ರಣವೀರ್ ಸಿಂಗ್ ರವರಿಗೆ ಈ ಪ್ರಶಸ್ತಿ ಲಭಿಸಲಿದೆಯಂತೆ !