Select Your Language

Notifications

webdunia
webdunia
webdunia
webdunia

ಬಾಲಿವುಡ್ ನಟ ನಾನಾ ಪಾಟೇಕರ್ ಚಿತ್ತ ಕನ್ನಡದತ್ತ

ಬಾಲಿವುಡ್ ನಟ ನಾನಾ ಪಾಟೇಕರ್ ಚಿತ್ತ ಕನ್ನಡದತ್ತ
ಬೆಂಗಳೂರು , ಶುಕ್ರವಾರ, 18 ಮೇ 2018 (17:06 IST)
ಕ್ರೇಜಿ ಸ್ಟಾರ್ ರವಿಚಂದ್ರನ್ ಅವರ ಮಗ ಮನೋರಂಜನ್ ರವಿಚಂದ್ರನ್ ಅಭಿನಯಿಸುತ್ತಿರುವ ಕನ್ನಡದ ‘ಚಿಲ್ಲಂ’ ಚಿತ್ರದಲ್ಲಿ ಇದೀಗ ಬಾಲಿವುಡ್ ನ ಸ್ಟಾರ್ ನಟರೊಬ್ಬರು ವಿಲನ್ ಪಾತ್ರದಲ್ಲಿ ನಟಿಸುತ್ತಿದ್ದಾರಂತೆ.
ಈ ಮೊದಲು ಕನ್ನಡದ ಖ್ಯಾತ ನಟ ರಾಘವೇಂದ್ರ ರಾಜ್ ಕುಮಾರ್ ಅವರು ಈ ಚಿತ್ರದಲ್ಲಿ ವಿಲನ್ ಪಾತ್ರದಲ್ಲಿ ನಟಿಸುತ್ತಿರುವ ವಿಷಯ ಎಲ್ಲರಿಗೂ ತಿಳಿದೆ ಇದೆ. ಆದರೆ ಇದೀಗ ಬಾಲಿವುಡ್ ನ ನಟ ನಾನಾ ಪಾಟೇಕರ್ ಅವರು ಕೂಡ ಈ ಚಿತ್ರದಲ್ಲಿ ವಿಲನ್ ಪಾತ್ರದಲ್ಲಿ ಅಭಿನಯಿಸುತ್ತಿರುವುದಾಗಿ ತಿಳಿದುಬಂದಿದೆ.  
 
ಲೂಸ್ ಮಾದ ಯೋಗಿ ಅವರ 'ಯಕ್ಷ' ಸಿನಿಮಾದಲ್ಲಿ ನಟಿಸಿದ ನಾನಾ ಪಾಟೇಕರ್ ಅವರು ಇದೀಗ ಈ ಚಿತ್ರದ ಮೂಲಕ ಮತ್ತೆ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ಈ ಚಿತ್ರದಲ್ಲಿ ಕೆಂಪ ಚಿತ್ರದ ಬೆಡಗಿ ಪ್ರಿಯಾಂಕಾ ನಾಯಕಿಯಾಗಿ ಅಭಿನಯಿಸುತ್ತಿದ್ದು , ಬಿಗ್ ಬಾಸ್ ಸೀಸನ್ 5ರ ರನ್ನರ್ ಅಪ್ ಆಗಿದ್ದ ದಿವಾಕರ್ ಕೂಡ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇನ್‌ಸ್ಟಾಗ್ರಾಂ ಖಾತೆ ತೆರೆದ ವಿಶ್ವಸುಂದರಿ ಐಶ್ ಬೇಬಿ