Publish Date: Wed, 05 Jul 2017 (13:40 IST)
Updated Date: Wed, 05 Jul 2017 (13:55 IST)
ಕನ್ನಡದಲ್ಲಿ ನಿರ್ಮಾಣವಾಗುತ್ತಿರುವ ಬಿಗ್ ಬಜೆಟ್ ಚಿತ್ರದಲ್ಲಿ ದಕ್ಷಿಣದ ಖ್ಯಾತ ನಟಿ ನಯನತಾರಾ ನಟಿಸುತ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ನಯನತಾರಾ ಕುರುಕ್ಷೇತ್ರ ಚಿತ್ರದಲ್ಲಿ ದ್ರೌಪದಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.
ಜುಲೈ 23ರಿಂದ ಚಿತ್ರೀಕರಣ ಆರಂಭವಾಗಲಿದೆ ಎನ್ನಲಾಗಿದ್ದು, ಚಿತ್ರದ ಪೂರ್ವ ತಯಾರಿಯಲ್ಲಿರುವ ಚಿತ್ರ ತಂಡ ನಯನತಾರಾಗೆ ಈ ಆಫರ್ ನೀಡಿದೆ. ಆದರೆ, ಈ ಬಗ್ಗೆ ಅಧಿಕೃತವಾಗಿ ಯಾವುದೇ ಹೇಳಿಕೆ ಹೊರಬಿದ್ದಿಲ್ಲ. ಶ್ರೀರಾಮ ರಾಜ್ಯಂ ಚಿತ್ರದಲ್ಲಿ ಸೀತೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ನಯನತಾರಾ ಪೌರಾಣಿಕ ಪಾತ್ರಗಳಿಗೆ ಹೇಳಿ ಮಾಡಿಸಿದ ನಟಿ. ಹೀಗಾಗಿ, ದರೌಪದಿ ಪಾತ್ರಕ್ಕೆ ನಯನತಾರಾ ಹೆಸರು ಕೇಳಿಬಂದಿದೆ.
2011ರಲ್ಲಿ ತೆರೆ ಕಂಡ ಸೂಪರ್ ಚಿತ್ರದಲ್ಲಿ ನಯನತಾರಾ ಕಾಣಿಸಿಕೊಂಡಿದ್ದರು. ಇದೀಗ, ಮತ್ತೆ ಕನ್ನಡಕ್ಕೆ ಬರುವ ಸುದ್ದಿ ಹರಿದಾಡುತ್ತಿದೆ. ರವಿಚಂದ್ರನ್ ಈ ಚಿತ್ರದಲ್ಲಿ ಕೃಷ್ಣನ ಪಾತ್ರ ನಿರ್ವಹಿಸುತ್ತಿದ್ದು, ದರ್ಶನ್ ಧುರ್ಯೋದನ ಪಾತ್ರದಲ್ಲಿ ನಟಿಸುತ್ತಿದ್ದಾರೆ. ನಾಗಣ್ಣ ಚಿತ್ರ ನಿರ್ದೇಶಿಸುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ