Publish Date: Mon, 29 Mar 2021 (11:22 IST)
Updated Date: Mon, 29 Mar 2021 (11:29 IST)
ಚೆನ್ನೈ : ಕಾಲಿವುಡ್ ನ ಲೇಡಿ ಸೂಪರ್ ಸ್ಟಾರ್ ನಯನತಾರಾ ಅವರು ನಿರ್ಮಾಪಕ ವಿಘ್ನೇಶ್ ಶಿವನ್ ಅವರೊಂದಿಗೆ ಡೇಟಿಂಗ್ ಮಾಡುತ್ತಿರುವ ವಿಚಾರ ಎಲ್ಲರಿಗೂ ತಿಳಿದೆ ಇದೆ. ಇತ್ತೀಚಿನ ಮಾಹಿತಿ ಪ್ರಕಾರ ಅವರು ಸದ್ಯದಲ್ಲೇ ಮದುವೆಯಾಗಲು ನಿರ್ಧರಿಸಿದ್ದಾರಂತೆ.
ಇತ್ತೀಚೆಗಷ್ಟೆ ನಯನತಾರಾ ಮತ್ತು ವಿಘ್ನೇಶ್ ಸೋಶಿಯಲ್ ಮೀಡಿಯಾದಲ್ಲಿ ಫೋಟೋವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ಅವರು ಉಂಗುರವನ್ನು ತೋರಿಸುತ್ತಿದ್ದರು. ಹಾಗಾಗಿ ಅವರಿಬ್ಬರು ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂಬ ಅನುಮಾನ ಅಭಿಮಾನಿಗಳಲ್ಲಿ ಮೂಡಿದೆ.
ಆದರೆ ಇತ್ತೀಚಿನ ಮಾಹಿತಿ ಪ್ರಕಾರ, ನಯನತಾರಾ ಕೆಲವೇ ಅತಿಥಿಗಳ ಸಮ್ಮುಖದಲ್ಲಿ ಡೆಸ್ಟಿನೇಶನ್ ವೆಡ್ಡಿಂಗ್ ನಡೆಸಲಿದ್ದಾರೆ. ಮುಂದಿನ ದಿನಗಳಲ್ಲಿ ದೇಶ ಮತ್ತು ದಿನಾಂಕಗಳನ್ನು ವಿಘ್ನೇಶ್ ಮತ್ತು ನಯನತಾರಾ ಪ್ರಕಟಿಸಲಿದ್ದಾರೆ ಎನ್ನಲಾಗಿದೆ.