ನಯನತಾರಾಗಾಗಿ ಕಾಂಪ್ರಮೈಸ್ ಆಗ್ತಾರಾ ಡಿ ಬಾಸ್ ದರ್ಶನ್?!

Webdunia
ಮಂಗಳವಾರ, 10 ಮಾರ್ಚ್ 2020 (09:41 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಚಾಲೆಂಜಿಂಗ್ ಸ್ಟಾರ್ ತಮ್ಮ ಸಿನಿಮಾಗಳಲ್ಲಿ ಕನ್ನಡ ಮೂಲದ ನಟಿಯರನ್ನೇ ನಾಯಕಿಯಾಗಿಸಲು ಆದ್ಯತೆ ನೀಡುತ್ತಾರೆ. ಆದರೆ ಅವರ ಐತಿಹಾಸಿಕ ಸಿನಿಮಾ ‘ರಾಜವೀರ ಮದಕರಿನಾಯಕ’ ಈ ಸಂಪ್ರದಾಯಕ್ಕೆ ಬ್ರೇಕ್ ಬೀಳುವ ಲಕ್ಷಣವಿದೆ.


ಮೂಲಗಳ ಪ್ರಕಾರ ರಾಜವೀರ ಮದಕರಿನಾಯಕ ಸಿನಿಮಾದಲ್ಲಿ ದರ್ಶನ್ ಗೆ ನಾಯಕಿಯಾಗಿ ಅಭಿನಯಿಸಲು ಚಿತ್ರತಂಡ ಬಹುಭಾಷಾ ನಟಿ ನಯನತಾರಾ ಅವರನ್ನು ಸಂಪರ್ಕಿಸಿದೆ ಎಂಬ ಸುದ್ದಿ ಬಂದಿದೆ. ಒಂದು ವೇಳೆ ನಯನತಾರಾ ನಾಯಕಿಯಾದರೆ ದರ್ಶನ್ ಬಹುದಿನಗಳ ನಂತರ ಬೇರೆ ಭಾಷೆಯ ನಾಯಕಿ ಜತೆಗೆ ಅಭಿನಯಿಸಿದಂತಾಗುತ್ತದೆ.

ರಾಜೇಂದ್ರ ಸಿಂಗ್ ಬಾಬು ನಿರ್ದೇಶನದಲ್ಲಿ ರಾಕ್ ಲೈನ್ ವೆಂಕಟೇಶ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ರಾಜವೀರ ಮದಕರಿನಾಯಕ ಸಿನಿಮಾ ಈಗಾಗಲೇ ಒಂದನೇ ಹಂತದ ಚಿತ್ರೀಕರಣ ಮುಗಿಸಿ ಎರಡನೇ ಹಂತದ ಚಿತ್ರೀಕರಣ ನಡೆಸುತ್ತಿದೆ. ಇದು ದರ್ಶನ್ ಅಭಿನಯಿಸುತ್ತಿರುವ ಮತ್ತೊಂದು ಐತಿಹಾಸಿಕ ಸಿನಿಮಾವಾಗಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments