ಚೆನ್ನೈ: ಸೂಪರ್ ಸ್ಟಾರ್ ನಟಿ ನಯನತಾರಾ ಸದ್ಯದಲ್ಲೇ ನಟನೆಗೆ ಗುಡ್ ಬೈ ಹೇಳಲು ಹೊರಟಿದ್ದಾರಾ? ಹೀಗೊಂದು ಸುದ್ದಿ ಹರಿದಾಡುತ್ತಿದೆ.
ಇತ್ತೀಚೆಗಷ್ಟೇ ನಿರ್ದೇಶಕ ವಿಘ್ನೇಶ್ ಶಿವನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ನಯನತಾರಾ ಮದುವೆ ಬಳಿಕ ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿಲ್ಲ. ಸದ್ಯಕ್ಕೆ ಶಾರುಖ್ ಖಾನ್ ನಾಯಕರಾಗಿರುವ ಜವಾನ್ ನಲ್ಲಿ ನಟಿಸುತ್ತಿದ್ದಾರೆ.
ಇದಾದ ಬಳಿಕ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಗಮನಹರಿಸಲು ಮುಂದಾಗಿರುವ ನಯನತಾರಾ ನಟನೆಯಿಂದ ದೂರವುಳಿಯಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.