ಬೆಂಗಳೂರು: ಕನ್ನಡ ಕಿರುತೆರೆಯ ಖ್ಯಾತ ನಟಿ ಗೊಂಬೆ ಅಲಿಯಾಸ್ ನೇಹಾ ಗೌಡ ಮೊದಲ ಮಗುವಿಗೆ ಜನ್ಮ ನೀಡಿದ್ದು ಈ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಲಕ್ಷ್ಮೀ ಬಾರಮ್ಮಾ ಧಾರವಾಹಿಯ ಮೂಲಕ ಮನೆ ಮಾತಾಗಿದ್ದ ನೇಹಾ ಗೌಡ ಮತ್ತು ಚಂದನ್ ದಂಪತಿ ಈಗ ಮೊದಲ ಮಗುವನ್ನು ಬರಮಾಡಿಕೊಂಡಿದ್ದಾರೆ. ಗೊಂಬೆ ಎಂದೇ ಅಭಿಮಾನಿಗಳಿಂದ ಪ್ರೀತಿಯಿಂದ ಕರೆಯಿಸಿಕೊಳ್ಳುವ ನೇಹಾಗೆ ಈಗ ಮರಿ ಬೊಂಬೆಯ ಆಗಮನವಾಗಿದೆ.
ನೇಹಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಮಗು ಮತ್ತು ತಾಯಿ ಆರೋಗ್ಯವಾಗಿರುವುದಾಗಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅವಳು ಬಂದಾಯ್ತು. ನಮ್ಮ ಪ್ರೀತಿಯ ಮಗಳು ಅಕ್ಟೋಬರ್ 29 ರಂದು ಈ ಭೂಮಿಗೆ ಬಂದಿದ್ದಾಳೆ. ನಿಮ್ಮೆಲ್ಲರ ಹಾರೈಕೆಗೆ ಧನ್ಯವಾದಗಳು ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ವಿಶೇಷವೆಂದರೆ ಲಕ್ಷ್ಮೀ ಬಾರಮ್ಮಾ ಧಾರವಾಹಿಯಲ್ಲಿ ಅಕ್ಕ-ತಂಗಿ ಪಾತ್ರ ಮಾಡಿದ್ದ ನೇಹಾ ಮತ್ತು ಕವಿತಾ ಗೌಡ ನಿಜ ಜೀವನದಲ್ಲಿ ಒಟ್ಟಿಗೇ ತಾಯಿಯಾಗಿದ್ದಾರೆ. ಒಂದು ತಿಂಗಳ ಹಿಂದೆ ಕವಿತಾ ಗೌಡ ಗಂಡು ಮಗುವಿಗೆ ಜನ್ಮ ನೀಡಿದ್ದರೆ ಇದೀಗ ನೇಹಾ ಹೆಣ್ಣು ಮಗುವಿನ ತಾಯಿಯಾಗಿದ್ದಾರೆ.