Webdunia - Bharat's app for daily news and videos

Install App

ಕ್ಷಮೆ ಕೇಳಿದರೂ ಹಂಸಲೇಖಾ ವಿರುದ್ಧ ನೆಟ್ಟಿಗರ ಅಸಮಾಧಾನ

Webdunia
ಸೋಮವಾರ, 15 ನವೆಂಬರ್ 2021 (18:04 IST)
ಬೆಂಗಳೂರು: ಪೇಜಾವರ ಶ್ರೀಗಳು ದಲಿತರ ಮನೆಗೆ ಹೋದಾಗ ಕೋಳಿ ಕೊಟ್ಟರೆ ತಿಂತಾರಾ ಎಂದು ವಿವಾದಾತ್ಮಕ ಮಾತನಾಡಿದ್ದ ಸಂಗೀತ ನಿರ್ದೇಶಕ ಹಂಸಲೇಖಾ ಕ್ಷಮೆ ಕೇಳಿದರೂ ನೆಟ್ಟಿಗರು ಅವರ ಮೇಲೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ವಿವಾದದ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ ಹಂಸಲೇಖಾ ಕ್ಷಮೆ ಯಾಚಿಸಿದ್ದಾರೆ. ಹಾಗಿದ್ದರೂ ಹಂಸಲೇಖಾ ಕೇವಲ ಪೇಜಾವರ ಶ್ರೀಗಳಿಗೆ ಮಾತ್ರವಲ್ಲ, ಇಡೀ ಹಿಂದೂ ಸಮುದಾಯದ ನಂಬಿಕೆಯನ್ನೇ ಪ್ರಶ್ನೆ ಮಾಡಿದರು. ನಿಮ್ಮ ಮೇಲೆ ಇದುವರೆಗೆ ಇದ್ದ ಗೌರವವೇ ಹೋಯ್ತು ಎಂದು ಕೆಲವರು ಕಿಡಿ ಕಾರಿದ್ದಾರೆ.

ಇನ್ನು, ಸಂಸದ ಪ್ರತಾಪ್ ಸಿಂಹ ಕೂಡಾ ಹಂಸಲೇಖಾ ವಿರುದ್ಧ ಕಿಡಿ ಕಾರಿದ್ದಾರೆ. ‘ಪೇಜಾವರ ಶ್ರೀಗಳು ಇತರ ಶ್ರೀಗಳಂತಲ್ಲ. ಜಾತಿ ವ್ಯವಸ್ಥೆಯನ್ನು ಮೀರಿ ಸಮಾನತೆ ಸಾರಿದವರು. ಪ್ರತ್ಯೇಕತೆಯನ್ನು ನಿವಾರಿಸಲು ಹೋರಾಡಿದವರು. ಸಾಧು ಸಂತರ ಆಹಾರ ಪದ್ಧತಿ ಸಸ್ಯಾಹಾರ. ಹಂಸಲೇಖಾ ಅವರು ಪರಿಜ್ಞಾನದಿಂದ ಮಾತನಾಡಬೇಕಿತ್ತು.

ಇಷ್ಟೆಲ್ಲಾ ಮಾತನಾಡುವವರು ನಿಮ್ಮ ಮನೆಗೆ ಮುಸ್ಲಿಂ ಸ್ನೇಹಿತರನ್ನು ಕರೆದು ಅವರಿಗೆ ಹಂದಿ ಮಾಂಸದ ಊಟ ಕೊಡಿ. ಅವರು ತಿನ್ನುತ್ತಾರಾ ನೋಡಿ. ಮುಸ್ಲಿಂ ಧರ್ಮದಲ್ಲಿ ಹಂದಿ ಮಾಂಸ ತಿನ್ನುವುದು ನಿಷಿದ್ಧ. ಹಾಗಂತ ಅದನ್ನು ತಪ್ಪು ಎನ್ನುತ್ತೀರಾ? ಪ್ರಗತಿಪರ ಎಂಬ ಗೀಳಿಗೆ ಬಿದ್ದು, ಪ್ರಚಾರ ಗಿಟ್ಟಿಸಲು ಇಂತಹ ಹೇಳಿಕೆ ನೀಡುತ್ತಿದ್ದಾರೆ’ ಎಂದು ಪ್ರತಾಪ್ ಸಿಂಹ ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments