ಹೈದರಾಬಾದ್: ಪ್ರಿನ್ಸ್ ಮಹೇಶ್ ಬಾಬು ನಾಯಕರಾಗಿರುವ ಸರ್ಕಾರುವಾರಿಪಾಟ ಸಿನಿಮಾ ಬಿಡುಗಡೆಯಾಗಿದೆ. ಆದರೆ ಸಿನಿಮಾ ಬಗ್ಗೆ ನೆಟ್ಟಿಗರು ನೆಗೆಟಿವ್ ಕಾಮೆಂಟ್ ಮಾಡುತ್ತಿದ್ದಾರೆ.
ಇದು ಮಹೇಶ್ ಬಾಬು ಮಾಮೂಲು ಸಿನಿಮಾಗಳಂತೇ ಮಸಾಲ ಸಿನಿಮಾ. ಹೊಸತೇನ ಏನೂ ಇಲ್ಲ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ.
ಈ ಸಿನಿಮಾ ಬಗ್ಗೆ ಅಭಿಮಾನಿಗಳಲ್ಲಿ ಭಾರೀ ನಿರೀಕ್ಷೆ ಇತ್ತು. ಆದರೆ ಅದಕ್ಕೆ ತಕ್ಕಷ್ಟು ಸಿನಿಮಾ ಚೆನ್ನಾಗಿಲ್ಲ ಎಂದು ನೆಟ್ಟಿಗರು ಮೆಮೆಗಳ ಮೂಲಕ ಟಾಂಗ್ ಕೊಟ್ಟಿದ್ದಾರೆ.