ಹಂಸಲೇಖ ಇದ್ರೆ ಶೋ ನೋಡಲ್ಲ: ಸರಿಗಮಪ ಶೋಗೆ ಬಾಯ್ಕಾಟ್ ಬಿಸಿ

Krishnaveni K
ಬುಧವಾರ, 4 ಸೆಪ್ಟಂಬರ್ 2024 (09:40 IST)
ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಇದ್ದರೆ ನಾವು ಸರಿಗಮಪ ರಿಯಾಲಿಟಿ ಶೋವನ್ನೇ ನೋಡಲ್ಲ ಎಂದು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಒಂದು ಶುರುವಾಗಿದೆ. ಇದಕ್ಕೆ ಕಾರಣ ಹಂಸಲೇಖರ ಇತ್ತೀಚೆಗಿನ ಕೆಲವು ಹೇಳಿಕೆಗಳು.

ಸಂಗೀತ ನಿರ್ದೇಶಕ ಹಂಸಲೇಖ ಇತ್ತೀಚೆಗೆ ಮೋದಿಯನ್ನು ಟೀಕಿಸುವ ಭರದಲ್ಲಿ ಮಲಯಾಳಿಗಳು ಬುದ್ಧಿವಂತರು, ಕನ್ನಡಿಗರು ಬುದ್ಧಿ ಬಳಸಲ್ಲ, ಭಾವನಾತ್ಮಕವಾಗಿ ಯೋಚಿಸುತ್ತಾರೆ ಎಂದಿದ್ದರು. ಅದಕ್ಕೆ ಮೊದಲು ಜೈನ ಮುನಿಗಳ, ಪೇಜಾವರ ಶ್ರೀಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದರು.
  
ಇತ್ತೀಚೆಗೆ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿರುವ ಹಂಸಲೇಖ ಬಗ್ಗೆ ಒಂದು ವರ್ಗದ ಜನರಲ್ಲಿ ಭಾರೀ ಆಕ್ರೋಶವಿದೆ. ಈ ಕಾರಣಕ್ಕೆ ಜೀ ಕನ್ನಡದಲ್ಲಿ ಪ್ರಸಾರವಾಗಲಿರುವ ಸರಿಗಮಪ ಹಾಡಿನ ರಿಯಾಲಿಟಿ ಶೋ ತೀರ್ಪುಗಾರರಾಗಿ ಈ ಬಾರಿಯೂ ಹಂಸಲೇಖ ಇದ್ದರೆ ನಾವು ಶೋವನ್ನೇ ಬಹಿಷ್ಕರಿಸುವುದಾಗಿ ಕೆಲವರು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಸೃಷ್ಟಿಸಿದ್ದಾರೆ.

ಜೀ ಕನ್ನಡ ಇತ್ತೀಚೆಗಷ್ಟೇ ಹೊಸ ಕಂತಿನ ಆರಂಭದ ಬಗ್ಗೆ ಪ್ರೋಮೋ ಹರಿಯಬಿಟ್ಟಿತ್ತು. ಇದರ ಬೆನ್ನಲ್ಲೇ ಕೆಲವರು ಹಂಸಲೇಖರಂತಹ ವಿಕ್ಷಿಪ್ತ ಮನಸ್ಥಿತಿಯ ವ್ಯಕ್ತಿ ಜಡ್ಜ್ ಆಗಿರುವ ಶೋವನ್ನು ನಾವು ನೋಡಲ್ಲ ಎಂದು ಹಠ ಹಿಡಿದಿದ್ದಾರೆ. ಈ ಟ್ರೆಂಡ್ ಎಲ್ಲಿಗೆ ಮುಟ್ಟುತ್ತೋ ನೋಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಹುಭಾಷಾ ನಟಿ ಕಿಡ್ನ್ಯಾಪ್, ಲೈಂಗಿಕ ಕಿರುಕುಳ ಕೇಸ್: ನಟ ದಿಲೀಪ್ ಕೇಸ್ ನಿಂದ ಖುಲಾಸೆ

ಮತ್ತೇ ಪ್ರೀತಿಯಲ್ಲಿ ಬಿದ್ರಾ ಸಾನಿಯಾ ಮಿರ್ಜಾ, ಕುತೂಹಲ ಮೂಡಿಸಿದ ಈ ಫೋಟೋ

ಮಧ್ಯದ ಬೆರಳು ತೋರಿಸಿ ದುರ್ವತನೆ ತೋರಿದ ಆರ್ಯನ್ ಖಾನ್‌ಗೆ ಬಿಗ್‌ ಶಾಕ್‌

ಎರಡನೇ ಬಾರಿ ಜೈಲು ಸೇರಿದ ದರ್ಶನ್ ಎಷ್ಟು ತೂಕ ಇಳಿಸಿಕೊಂಡಿದ್ದಾರೆ: ಶಾಕಿಂಗ್

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಮುಂದಿನ ಸುದ್ದಿ
Show comments