ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

Sampriya
ಭಾನುವಾರ, 16 ನವೆಂಬರ್ 2025 (13:48 IST)
Photo Credit X
ನವದೆಹಲಿ: ರಾಷ್ಟ್ರಪ್ರಶಸ್ತಿ ವಿಜೇತ ನಟಿ ಕೀರ್ತಿ ಸುರೇಶ್ ಅವರನ್ನು ಯುನಿಸೆಫ್ ಇಂಡಿಯಾದ ಸೆಲೆಬ್ರಿಟಿ ಅಡ್ವೊಕೇಟ್ ಆಗಿ ನೇಮಕ ಮಾಡಲಾಗಿದೆ ಎಂದು ಯುಎನ್ ಸಂಸ್ಥೆ ಇಂದು ಪ್ರಕಟಿಸಿದೆ.

ತಮಿಳು, ತೆಲುಗು ಮತ್ತು ಮಲಯಾಳಂ ಚಿತ್ರರಂಗದಲ್ಲಿ ತನ್ನ ಅಭಿನಯ ಮೂಲಕ ಭಾರೀ ಮೆಚ್ಚುಗೆಗೆ ಕೀರ್ತಿ ಸುರೇಶ್ ಅವರು ಪಾತ್ರರಾಗಿದ್ದಾರೆ. 

ದುರ್ಬಲ ಮಕ್ಕಳಿಗಾಗಿ ಯುನಿಸೆಫ್‌ನ ಪ್ರಯತ್ನಗಳನ್ನು ಬೆಂಬಲಿಸುವ ಸಾರ್ವಜನಿಕ ವ್ಯಕ್ತಿಗಳ ವಿಶೇಷ ಗುಂಪನ್ನು ಸೇರಿದ್ದಾರೆ ಎಂದು ಸಂಸ್ಥೆಯ ಹೇಳಿಕೆ ತಿಳಿಸಿದೆ. 

ಮಾನಸಿಕ ಆರೋಗ್ಯ, ಶಿಕ್ಷಣ ಮತ್ತು ಲಿಂಗ ಸಮಾನತೆಯಂತಹ ಪ್ರಮುಖ ವಿಷಯಗಳ ಕುರಿತು ಜಾಗೃತಿ ಮೂಡಿಸುವ ಕೆಲ‌ಸವನ್ನು ಕೀರ್ತಿ ಸುರೇಶ್ ಮಾಡಲಿದ್ದಾರೆ. 

"UNICEF ಇಂಡಿಯಾ ಗೌರವಾನ್ವಿತ ನಟಿ ಕೀರ್ತಿ ಸುರೇಶ್ ಅವರೊಂದಿಗೆ ಪಾಲುದಾರಿಕೆ ಹೊಂದಲು ಸಂತೋಷವಾಗಿದೆ. ಪ್ರೇಕ್ಷಕರೊಂದಿಗೆ ಅವರ ಆಳವಾದ ಸಂಪರ್ಕವು ಮಕ್ಕಳ ಹಕ್ಕುಗಳು ಮತ್ತು ಯೋಗಕ್ಷೇಮಕ್ಕಾಗಿ ಪ್ರತಿಪಾದಿಸಲು ಪ್ರಬಲ ಮತ್ತು ಸ್ಪೂರ್ತಿದಾಯಕ ವೇದಿಕೆಯನ್ನು ಒದಗಿಸುತ್ತದೆ" ಎಂದು UNICEF ಭಾರತದ ಪ್ರತಿನಿಧಿ ಸಿಂಥಿಯಾ ಮೆಕ್‌ಕ್ಯಾಫ್ರಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ನಿಶ್ಚಿತಾರ್ಥ ಮಾಡಿಕೊಂಡ ಉಗ್ರಂ ಮಂಜು ಜೋಡಿ ಭೇಟಿಯಾದ ಗೌತಮಿ ಜಾಧವ್‌

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಮುಂದಿನ ಸುದ್ದಿ