Publish Date: Wed, 10 Aug 2022 (09:20 IST)
Updated Date: Wed, 10 Aug 2022 (09:37 IST)
ಬೆಂಗಳೂರು: ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಮತ್ತು ಕ್ರಿಯೇಟಿವ್ ನಿರ್ದೇಶಕ, ನಟ ರಾಜ್ ಬಿ ಶೆಟ್ಟಿ ಬಗ್ಗೆ ಗಾಂಧಿನಗರದಲ್ಲಿ ಹೊಸ ಸುದ್ದಿಯೊಂದು ಹರಿದಾಡುತ್ತಿದೆ.
ರಮ್ಯಾ ಬಹಳ ಸಮಯದ ಬಳಿಕ ಸ್ಯಾಂಡಲ್ ವುಡ್ ಗೆ ಕಮ್ ಬ್ಯಾಕ್ ಮಾಡಲಿದ್ದಾರೆ ಎಂಬ ಸುದ್ದಿ ಕೆಲವು ದಿನಗಳಿಂದ ಕೇಳಿಬರುತ್ತಲೇ ಇದೆ. ಆದರೆ ಇದುವರೆಗೆ ಯಾವುದೇ ಸಿನಿಮಾ ಘೋಷಣೆಯಾಗಿಲ್ಲ. ಆದರೆ ಈಗ ರಮ್ಯಾ ಕತೆಯೊಂದನ್ನು ಒಪ್ಪಿಕೊಂಡಿದ್ದು ಇದನ್ನು ತಾವೇ ನಿರ್ಮಾಣ ಮಾಡಲು ಮುಂದಾಗಿದ್ದಾರಂತೆ.
ಈ ಸಿನಿಮಾವನ್ನು ರಾಜ್ ಬಿ ಶೆಟ್ಟಿ ನಿರ್ದೇಶಿಸಲಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ. ರಾಜ್ ಬಿ ಶೆಟ್ಟಿ ನಿರ್ದೇಶನದ ಗರುಡಗಮನ ವೃಷಭ ವಾಹನ ಸಿನಿಮಾವನ್ನು ರಮ್ಯಾ ಕೂಡಾ ಮೆಚ್ಚಿಕೊಂಡಿದ್ದರು. ಹೀಗಾಗಿ ಈಗ ರಾಜ್ ಬಿ ಶೆಟ್ಟಿ ನಿರ್ದೇಶನದಲ್ಲೇ ರಮ್ಯಾ ಕಮ್ ಬ್ಯಾಕ್ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಬಂದಿಲ್ಲ.