Publish Date: Sat, 07 Dec 2019 (09:12 IST)
Updated Date: Sat, 07 Dec 2019 (09:16 IST)
ಬೆಂಗಳೂರು: ಕಿರುತೆರೆಯ ಖ್ಯಾತ ನಟಿ, ಡಿಂಪಲ್ ಕ್ವೀನ್ ರಚಿತಾ ರಾಮ್ ಅಕ್ಕ ನಿತ್ಯಾ ರಾಮ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಉದ್ಯಮಿ ಗೌತಮ್ ಎಂಬವರ ಜತೆಗೆ ನಿತ್ಯಾ ವಿವಾಹ ಅದ್ಧೂರಿಯಾಗಿ ನೆರವೇರಿದೆ.
ಎರಡು ದಿನಗಳ ಕಾಲ ನಡೆದ ಕಾರ್ಯಕ್ರಮದಲ್ಲಿ ಎರಡೂ ಕುಟುಂಬಸ್ಥರು, ಸ್ಯಾಂಡಲ್ ವುಡ್ ಸ್ನೇಹಿತರು ಆಗಮಿಸಿ ನವಜೋಡಿಗೆ ಶುಭ ಹಾರೈಸಿದ್ದಾರೆ. ಅಕ್ಕನ ಮದುವೆಯಲ್ಲಿ ರಚಿತಾ ರಾಮ್ ಸಂಭ್ರಮಿಸುವ ಫೋಟೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.