ಶಿವರಾಜ್ ಕುಮಾರ್ ಸಿನಿಮಾ, ಜಾಹೀರಾತುಗಳಿಗೆ ನಿರ್ಬಂಧವಿಲ್ಲ ಎಂದ ಚುನಾವಣಾ ಆಯೋಗ

Krishnaveni K
ಬುಧವಾರ, 27 ಮಾರ್ಚ್ 2024 (13:00 IST)
ಬೆಂಗಳೂರು: ಶಿವಮೊಗ್ಗ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಪ್ರಚಾರ ನಡೆಸುತ್ತಿರುವ ಪತಿ, ನಟ ಶಿವರಾಜ್ ಕುಮಾರ್ ಸಿನಿಮಾಗಳಿಗೆ, ಜಾಹೀರಾತುಗಳಿಗೆ ಯಾವುದೇ ನಿರ್ಬಂಧವಿರಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ.

ಪತ್ನಿ ಪರ ಶಿವರಾಜ್ ಕುಮಾರ್ ಶಿವಮೊಗ್ಗದಲ್ಲಿ ಬಿಡುವಿಲ್ಲದೇ ಪ್ರಚಾರ ನಡೆಸುತ್ತಿದ್ದಾರೆ. ಜೊತೆಗೆ ಕಾಂಗ್ರೆಸ್ ನಾಯಕರ ಜೊತೆ ಸಭೆಗಳಲ್ಲಿ ಭಾಗವಹಿಸುತ್ತಿದ್ದಾರೆ. ಹೀಗಾಗಿ ಅವರ ಸಿನಿಮಾ, ಜಾಹೀರಾತುಗಳು, ಬಿಲ್ ಬೋರ್ಡ್ ಗಳಿಗೆ ನಿರ್ಬಂಧ ವಿಧಿಸಬೇಕು ಎಂದು ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿತ್ತು.

ಇದಕ್ಕೆ ಪ್ರತಿಕ್ರಿಯಿಸಿರುವ ಚುನಾವಣಾ ಆಯೋಗ, ‘ಚುನಾವಣೆಗೆ ಸ್ಪರ್ಧಿಸುವ ಅಥವಾ ಪ್ರಚಾರ ಮಾಡುವ ನಟರನ್ನು ಒಳಗೊಂಡ ಸಿನಿಮಾಗಳ ಪ್ರದರ್ಶನವನ್ನು ಸರ್ಕಾರದ ಹಣದಿಂದ ನಡೆಸಲ್ಪಡುವ ದೂರದರ್ಶನ ವಾಹಿನಿಗಳಲ್ಲಿ ಮಾತ್ರ ನಿಷೇಧಿಸಬಹುದಾಗಿದೆ. ಖಾಸಗಿ ಟಿವಿ ಚಾನೆಲ್ ಗಳು ಅಥವಾ ಥಿಯೇಟರ್ ಗಳಲ್ಲಿ ನಿರ್ಬಂಧ ವಿಧಿಸಲು ಸಾಧ‍್ಯವಿಲ್ಲ’ ಎಂದಿದೆ.

ಶಿವಮೊಗ್ಗದಲ್ಲಿ ಗೀತಾ ಶಿವರಾಜ್ ಕುಮಾರ್ ಪರವಾಗಿ ಶಿವರಾಜ್ ಕುಮಾರ್ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಸಾರ್ವಜನಿಕ ರಾಲಿಗಳಲ್ಲಿ ಭಾಗಿಯಾಗುತ್ತಿದ್ದಾರೆ. ಅವರು ಪ್ರಭಾವೀ ವ್ಯಕ್ತಿಯಾಗಿದ್ದರೂ ಅವರ ಸಿನಿಮಾಗಳ ಮೇಲೆ ನಿರ್ಬಂಧ ಹೇರಲು ಸಾ‍ಧ್ಯವಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನದ್ದಲ್ಲ: ಪುರುಷೋತ್ತಮ ಬಿಳಿಮಲೆ

ಧನ್ವೀರ್ ಹೇಳಿಕೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಂಕಷ್ಟ

ಮುಂದಿನ ಸುದ್ದಿ
Show comments