Select Your Language

Notifications

webdunia
webdunia
webdunia
webdunia

ಬೆಂಗಳೂರು ಚಲನಚಿತ್ರೋತ್ಸವಕ್ಕೆ ಆಯ್ಕೆಯಾದ ಓ ನನ್ನ ಚೇತನ

ಬೆಂಗಳೂರು ಚಲನಚಿತ್ರೋತ್ಸವಕ್ಕೆ ಆಯ್ಕೆಯಾದ ಓ ನನ್ನ ಚೇತನ
ಬೆಂಗಳೂರು , ಶುಕ್ರವಾರ, 4 ಮಾರ್ಚ್ 2022 (09:00 IST)
ಬೆಂಗಳೂರು: ವಿಕ್ಟರಿ, ಕೃಷ್ಣ ಟಾಕೀಸ್ ಸಿನಿಮಾ ಖ್ಯಾತಿ ಅಪೂರ್ವ ನಿರ್ದೇಶನದ ಚೊಚ್ಚಲ ಸಿನಿಮಾ ಓ ನನ್ನ ಚೇತನ ಇದೀಗ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿದೆ.

ಇಂದಿನ ಮಕ್ಕಳು ಮತ್ತು ಸ್ಮಾರ್ಟ್ ಫೋನ್ ಬಳಕೆ ಕುರಿತಾದ ಕತೆ ಹೊಂದಿರುವ ಸಿನಿಮಾ ಇದಾಗಿದ್ದು ಹೊಸಬರ ಸಿನಿಮಾಗೆ ಅಂತಾರಾಷ್ಟ್ರೀಯ ಮನ್ನಣೆ ಸಿಕ್ಕಂತಾಗಿದೆ. ಮಾರ್ಚ್ 9 ರಂದು ಮಧ್ಯಾಹ್ನ 3.15 ಕ್ಕೆ ಸಿನಿಮಾ ಒರೈಯನ್ ಮಾಲ್ ನ
ಪಿವಿಆರ್ ನಲ್ಲಿ ಪ್ರದರ್ಶನಗೊಳ್ಳಲಿದೆ.

ಈ ಚಿತ್ರಕ್ಕೆ ನಿರ್ದೇಶಕ ಹರಿಸಂತು ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ. ಮಾಸ್ಟರ್ ಪ್ರತೀಕ್, ಬೇಬಿ ಡಿಂಪನಾ, ಮಾಸ್ಟರ್ ಶೌರ್ಯ, ಮಾಸ್ಟರ್ ಹರ್ಷ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಸದ್ಯಕ್ಕೆ ಚಿತ್ರದ ಫಸ್ಟ್ ಲುಕ್ ಮತ್ತು ಟೀಸರ್ ಬಿಡುಗಡೆಯಾಗಿದ್ದು, ಸದ್ಯದಲ್ಲೇ ಟ್ರೈಲರ್ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವಿಕ್ರಾಂತ್ ರೋಣ ಪಾರ್ಟ್ 2 ಗೆ ರೆಡಿಯಾಗ್ತಿದ್ದಾರೆ ಕಿಚ್ಚ-ಅನೂಪ್ ಭಂಡಾರಿ